ಸೆಲ್ಫಿ ತೆಗೆಯಿರಿ, ಭಾರತೀಯ ಅಥ್ಲೆಟ್ ಗಳನ್ನು ಪ್ರೋತ್ಸಾಹಿಸಿ: ರೈಲ್ವೆ ಇಲಾಖೆಯಿಂದ 'ಚೀರ್ ಫಾರ್ ಇಂಡಿಯಾ' ಅಭಿಯಾನ  

ಇನ್ನು ಕೆಲವೇ ದಿನಗಳಲ್ಲಿ ಟೋಕ್ಯೋ ಒಲಿಂಪಿಕ್ಸ್ ಆರಂಭವಾಗಲಿದೆ. ಕೋವಿಡ್-19 ಮಧ್ಯೆ ಕ್ರೀಡಾ ಸ್ಪೂರ್ತಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ರೈಲ್ವೆ ನಿಲ್ದಾಣದಲ್ಲಿ ಸೆಲ್ಫಿ ಪಾಯಿಂಟ್ ನಲ್ಲಿ ಫೋಟೋ ತೆಗೆಸಿಕೊಂಡ ನಾಗರಿಕ
ರೈಲ್ವೆ ನಿಲ್ದಾಣದಲ್ಲಿ ಸೆಲ್ಫಿ ಪಾಯಿಂಟ್ ನಲ್ಲಿ ಫೋಟೋ ತೆಗೆಸಿಕೊಂಡ ನಾಗರಿಕ

ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ಟೋಕ್ಯೋ ಒಲಿಂಪಿಕ್ಸ್ ಆರಂಭವಾಗಲಿದೆ. ಕೋವಿಡ್-19 ಮಧ್ಯೆ ಕ್ರೀಡಾ ಸ್ಪೂರ್ತಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಒಲಿಂಪಿಕ್ಸ್ ನಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳನ್ನು ಉತ್ತೇಜಿಸಲು ನೈರುತ್ಯ ರೈಲ್ವೆ ವಲಯ ಪ್ರಮುಖ ರೈಲು ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್ ಗಳನ್ನು ರಚಿಸಿದೆ. ಇಲ್ಲಿ ನಿಂತುಕೊಂಡು ಸಾರ್ವಜನಿಕರು ಸೆಲ್ಫಿ ಅಥವಾ ಫೋಟೋ ತೆಗೆದುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಂತೆ ಕೋರಲಾಗಿದೆ.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೆ ಆರ್ ಪುರಂ ರೈಲು ನಿಲ್ದಾಣಗಳಲ್ಲಿ ಈ ಸೆಲ್ಫಿ ಪಾಯಿಂಟ್ ಗಳನ್ನು ಅಳವಡಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com