ವಾರದಲ್ಲಿ 48 ಮಂದಿಗೆ ಕೊರೋನಾ ಸೋಂಕು: ತುಮಕೂರಿನ ಸಿಂಗಾಪುರ ಗ್ರಾಮ ಸಂಪೂರ್ಣ ಸೀಲ್‌ಡೌನ್

ಕೋವಿಡ್ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಮಾಡುತ್ತಿದ್ದರೆ, ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸಿಂಗಾಪುರ ಗ್ರಾಮದಲ್ಲಿ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. 
ಗ್ರಾಮದಲ್ಲಿರುವ ಲಸಿಕಾ ಕೇಂದ್ರ
ಗ್ರಾಮದಲ್ಲಿರುವ ಲಸಿಕಾ ಕೇಂದ್ರ

ತುಮಕೂರು: ಕೋವಿಡ್ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಮಾಡುತ್ತಿದ್ದರೆ, ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸಿಂಗಾಪುರ ಗ್ರಾಮದಲ್ಲಿ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. 

ಹುಳಿಯಾರು ಹೋಬಳಿ ಯಳನಾಡು ಪಂಚಾಯತ್​ನ ಸಿಂಗಾಪುರ ಗ್ರಾಮದಲ್ಲಿ ಇದ್ದಕ್ಕಿದ್ದದಂತೆ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿದೆ. ಹಾಗಾಗಿ, ಸೀಲ್ಡೌನ್ ಮಾಡಲಾಗಿದೆ. 

ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿಹೆಚ್​ಒ, ಎಡಿಸಿ, ಸಿಇಒ, ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಸೇರಿ ಇತರ ಅಧಿಕಾರಿಗಳ ದಂಡೇ ದೌಡಾಯಿಸಿದೆ.

ಗ್ರಾಮದಲ್ಲಿ ವಾರದಲ್ಲಿ 48 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದರೆ, ಇಬ್ಬರು ಸಾವನ್ನಪ್ಪಿದ್ದಾರೆ. ಸೋಂಕಿತರನ್ನು ಇದೀಗ ಚಿಕ್ಕನಾಯಕನಹಳ್ಳಿ ಕೋವಿಡ್ ಕೇರ್ ಸೆಂಟರ್​ಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದ್ದು,. ಸ್ಥಳದಲ್ಲಿ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್, ತಾಲೂಕು ವೈದ್ಯಾಧಿಕಾರಿ ಮೊಕ್ಕಾಂ ಹೂಡಿದ್ದಾರೆ.

ಸಿಂಗಾಪುರ ಗ್ರಾಮದಲ್ಲಿ 900ರಷ್ಟು ಜನ ಸಂಖ್ಯೆಯಿದೆ. ನಿತ್ಯ ಮೂರು ತಂಡಗಳಿಂದ ಪ್ರತಿಯೊಬ್ಬರಿಗೂ ಕೋವಿಡ್ ಪರೀಕ್ಷೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ 4 ದಿನಗಳಲ್ಲಿ ಒಟ್ಟು 350 ಮಂದಿಗೆ ಪರೀಕ್ಷೆ ನಡೆಸಲಾಗಿದೆ.

ಈ ಪೈಕಿ 48 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಸೋಂಕು ಹೆಚ್ಚಳವಾದ ಹಿನ್ನೆಲೆ ಭಯಭೀತರಾಗಿರುವ ಜನರು ಸ್ವಯಂ ಪ್ರೇರಿತರಾಗಿ ಪರೀಕ್ಷೆ ಮಾಡಿಸಿಕೊಳ್ಳಲು ಮುಂದೆ ಬರುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com