ಮೇಕೆದಾಟು ಯೋಜನೆ ಎರಡೂ ರಾಜ್ಯಗಳಿಗೆ ಪ್ರಯೋಜನಕಾರಿ: ತಮಿಳುನಾಡಿನ ವಿರೋಧಕ್ಕೆ ರಾಜ್ಯ ನಾಯಕರ ಪ್ರತಿಕ್ರಿಯೆ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮೆಕೆದಾಟು ಯೋಜನೆಯನ್ನು ಮುಂದುವರಿಸಬಾರದು ಎಂದು ಒತ್ತಾಯಿಸಿದ್ದಾರೆ.
ಮೇಕೆದಾಟು
ಮೇಕೆದಾಟು

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮೆಕೆದಾಟು ಯೋಜನೆಯನ್ನು ಮುಂದುವರಿಸಬಾರದು ಎಂದು ಒತ್ತಾಯಿಸಿದ್ದಾರೆ. ಮಾಜಿ ಜಲಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ಸ್ಟಾಲಿನ್ ಅವರ ಪತ್ರಕ್ಕೆ ಪ್ರತಿಕ್ರಿಯಿಸಿ, “ಕಾವೇರಿಗೆ ಸಂಬಂಧಿಸಿದ ನೀರಾವರಿ ಯೋಜನೆಗಳ ಕುರಿತು ನಮ್ಮ ಹಕ್ಕುಗಳನ್ನು ತಮಿಳುನಾಡು ಪ್ರಶ್ನಿಸುತ್ತಿದೆ. ಈ ಸಮಯದಲ್ಲಿ, ಹೊಸ ಸರ್ಕಾರವು ರಾಜಕೀಯ ಲಾಭಕ್ಕಾಗಿ  ಒಂದು ಸಣ್ಣ ವಿಷಯವನ್ನು ದೊಡ್ಡದಾಗಿ ಮಾಡುತ್ತಿದೆ” ಎಂದು ಹೇಳಿದರು.

"ಕಾವೇರಿ ನಿರ್ವಹಣಾ ಮಂಡಳಿಯ ಆದೇಶದ  ನಂತರ ಅದು ಅವರಿಗೆ ಕಷ್ಟಕರವಾಗಿದೆ. ಕರ್ನಾಟಕ ಮತ್ತು ತಮಿಳುನಾಡು ಎರಡಕ್ಕೂ ಮೆಕೆದಾಟು ಪ್ರಯೋಜನಕಾರಿಯಾಗಿದೆ. ಅವರ ನೀರಿನ ಪಾಲು ಅವರಿಗೆ ಸಿಗಲಿದೆ. ಹೆಚ್ಚುವರಿ ನೀರನ್ನು ಮಾತ್ರ ಬಳಸುವುದರಿಂದ ಯಾವುದೇ ಸಮಸ್ಯೆ ಇರುವುದಿಲ್ಲ. ತಮಿಳು ನಾಡು ಈ ಯೋಜನೆಗೆ ಮೊದಲಿನಿಂದಲೂ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದೆ. ನಾವು ಸರಿಯಾದ ಮಾರ್ಗದಲ್ಲೇ ಇದ್ದೇವೆ.ನಮ್ಮ ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ. ”

ಮೆಕೆದಾಟು ಕುಡಿಯುವ ನೀರಿನ ಯೋಜನೆಯಾಗಿರುವುದರಿಂದ ತಮಿಳುನಾಡು ಸಹಕರಿಸಬೇಕಿದೆ ಮತ್ತು ಕಾವೇರಿಯಲ್ಲಿ ನೀರಿನ ಹರಿವು ಕಡಿಮೆ ಇರುವಾಗ ಕರ್ನಾಟಕವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಉಆವ ಅಡ್ಡಿಯನ್ನುಂಟು ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಮತ್ತು ಮಾಜಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, “ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಬೇಕಾಗಿರುವುದು ಸುಪ್ರೀಂ ಕೋರ್ಟ್‌ನ ತೀರ್ಪು. ಮೆಕೆದಾಟುವಿನೊಂದಿಗೆ ಮುಂದುವರಿಯಲು ಮತ್ತು ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ರಾಜ್ಯ ಸರ್ಕಾರಕ್ಕೆ ರಾಜಕೀಯ ಇಚ್ಚಾಶಕ್ತಿ ಬೇಕು. ನಮ್ಮಲ್ಲಿ ಹಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ" ಎಂದರು.

ಮುಖ್ಯಮಂತ್ರಿ ಹಾಗೂ  ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸೋಮವಾರ ಸಿಎಂ ಯಡಿಯೂರಪ್ಪ ಅವರೊಂದಿಗೆ ಈ ವಿಷಯವನ್ನು ಚರ್ಚಿಸಿವ ನಿರೀಕ್ಷೆಯಿದೆ.s

ತಾನು ತಜ್ಞರೊಂದಿಗೆ ಮಾತನಾಡಿದ್ದಾಗಿಯೂ ಸೋಮವಾರ ಮಾಧ್ಯಮಗಳಿಗೆ ಮಾಹಿತಿ ನೀಡಲಿರುವುದಾಗಿಯೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದ್ದು, ಈ ವಿಷಯದ ಬಗ್ಗೆಯೂ ಚರ್ಚಿಸುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com