ಕೊರೋನಾ ಹಿನ್ನೆಲೆ: ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ 

ಆಷಾಢ ಮಾಸ ಆರಂಭಕ್ಕೆ ಕೆಲವೇ ದಿನ ಬಾಕಿ, ಮೈಸೂರಿನ ನಾಡದೇವತೆ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದಲ್ಲಿ ಭಕ್ತರ ದಂಡೇ ಸಾಗುತ್ತದೆ. ಆಷಾಢ ಶುಕ್ರವಾರಗಳಂತೂ ಜನವೋ ಜನ.
ಮೈಸೂರು ಚಾಮುಂಡಿ ಬೆಟ್ಟ
ಮೈಸೂರು ಚಾಮುಂಡಿ ಬೆಟ್ಟ

ಮೈಸೂರು: ಆಷಾಢ ಮಾಸ ಆರಂಭಕ್ಕೆ ಕೆಲವೇ ದಿನ ಬಾಕಿ, ಮೈಸೂರಿನ ನಾಡದೇವತೆ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದಲ್ಲಿ ಭಕ್ತರ ದಂಡೇ ಸಾಗುತ್ತದೆ. ಆಷಾಢ ಶುಕ್ರವಾರಗಳಂತೂ ಜನವೋ ಜನ.

ಈ ಬಾರಿ ಕೋವಿಡ್-19 ಸಾಂಕ್ರಾಮಿಕ ಭೀತಿ ಇರುವುದರಿಂದ ಆಷಾಢ ಶುಕ್ರವಾರಗಳಂದು ಮತ್ತು ಶನಿವಾರ, ಭಾನುವಾರ ಸೇರಿದಂತೆ ಸಾರ್ವಜನಿಕ ರಜಾ ದಿನಗಳಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ  ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಆಷಾಢ ಶುಕ್ರವಾರಗಳಂದು ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆ, ಕೋವಿಡ್ ಸೋಂಕು ಹರಡುವಿಕೆಗೆ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟ ಹಾಗೂ ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರಸುಂದರಿ ದೇವಾಲಯಕ್ಕೆ ಸಾರ್ವಜನಿಕರ ನಿರ್ಬಂಧ ವಿಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊರೊನಾ ಅನ್‌ಲಾಕ್ ಹಿನ್ನೆಲೆಯಲ್ಲಿ ಜುಲೈ 5ರಿಂದ ಧಾರ್ಮಿಕ ಕೇಂದ್ರಗಳಿಗೆ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಸೋಮವಾರ ಚಾಮುಂಡಿ ಬೆಟ್ಟಕ್ಕೆ ನೂರಾರು ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com