ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆ ಮುಕ್ತಾಯ, ಎಸ್ಐಟಿ ಅಂತಿಮ ತನಿಖಾ ವರದಿ ಸಿದ್ಧ!

ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಸ್ಐಟಿ ಮಂಗಳವಾರ ಮಾಹಿತಿ ನೀಡಿದೆ. 
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಸ್ಐಟಿ ಮಂಗಳವಾರ ಮಾಹಿತಿ ನೀಡಿದೆ. 

ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ. 

ಈ ಬೆಳವಣಿಗೆ ನಡುವಲ್ಲೇ ಜಾರಕಿಹೊಳಿ ಹಾಗೂ ಗೋಕಾಕ್ ನಲ್ಲಿರುವ ಅವರ ಬೆಂಬಲಿಗರಲ್ಲಿ ತಳಮಳ ಶುರುವಾಗಿದೆ. ಪ್ರಕರಣ ಸಂಬಂಧ ಜಾರಕಿಹೊಳಿಗೆ ಕ್ಲೀನ್ ಚಿಟ್ ಸಿಗುತ್ತದೆಯೋ ಇಲ್ಲವೋ ಎಂಬುದರ ಕುರಿತು ತಳಮಳ ಶುರುವಾಗಿದೆ. ಬಿ-ರಿಪೋರ್ಟ್ ಸಲ್ಲಿಕೆಯಾದ ಬಳಿಕವೇ ಸಿಡಿ ಪ್ರಕರಣ ಅಂತ್ಯಗೊಳ್ಳಲಿದ್ದು, ಇದಾದ ಬಳಿಕ ಜಾರಕಿಹೊಳಿ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆಗಳಿವೆ. 

ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಸ್ವಪಕ್ಷೀಯರ ವಿರುದ್ಧವೇ ತಿರುಗಿಬಿದ್ದಿದ್ದರು. ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ. ವಿಪಕ್ಷಗಳ ಜತೆಗೆ ಸ್ವಪಕ್ಷೀಯರೂ ಖೆಡ್ಡಾ ತೋಡಿದ್ದಾರೆ. ನನ್ನ ರಾಜಕೀಯ ಜೀವನ ಅಂತ್ಯಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶಾಸಕ ರಮೇಶ್ ಜಾರಕಿಹೊಳಿ ದೇವೇಂದ್ರ ಫಡ್ನವಿಸ್​ಗೆ ಈ ಹಿಂದೆ ದೂರು ಹೇಳಿದ್ದರು. 

ಇದಾದ ಬಳಿಕ ಜಾರಕಿಹೊಳಿ ಸಹೋದರರು ಗೋಕಾಕ್ ನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸುವುದಾಗಿಯೂ ಹೇಳಿದ್ದರು. ಆದರೆ, ಅದಾವುದೂ ಆಗಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com