ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 514 ಸೇರಿ ಇಂದು 2,530 ಪ್ರಕರಣ ಪತ್ತೆ; 62 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 2,530 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,64,868ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 2,530 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,64,868ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 62 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,663ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 514 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,18,021ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 9 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 3,344 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,90,453ಕ್ಕೆ ಏರಿಕೆಯಾಗಿದೆ. ಇನ್ನು 38,729 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,57,552 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 2,530 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.60ಕ್ಕೆ ಇಳಿದಿದೆ.

ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 176, ಚಿಕ್ಕಮಗಳೂರು 114, ದಕ್ಷಿಣ ಕನ್ನಡ 210, ಹಾಸನ 202, ಮೈಸೂರು 294, ಶಿವಮೊಗ್ಗ 167, ತುಮಕೂರು 136, ಉಡುಪಿ 148 ಪ್ರಕರಣಗಳು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com