ಬಾಂಗ್ಲಾದೇಶ ಯುವತಿ ಮೇಲಿನ ಅತ್ಯಾಚಾರ ಪ್ರಕರಣ; ಪೊಲೀಸರಿಂದ ನ್ಯಾಯಾಲಯಕ್ಕೆ 1000 ಪುಟಗಳ ಚಾರ್ಜ್'ಶೀಟ್ ಸಲ್ಲಿಕೆ

ಇತ್ತೀಚೆಗೆ ರಾಷ್ಟ್ರದ ಗಮನ ಸೆಳೆದಿದ್ದ ಬಾಂಗ್ಲಾದೇಶದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಕೇವಲ ಐದು ವಾರಗಳಲ್ಲೇ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ನೇತೃತ್ವದ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಇತ್ತೀಚೆಗೆ ರಾಷ್ಟ್ರದ ಗಮನ ಸೆಳೆದಿದ್ದ ಬಾಂಗ್ಲಾದೇಶದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಕೇವಲ ಐದು ವಾರಗಳಲ್ಲೇ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ನೇತೃತ್ವದ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ. 

ಈ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ಆಧರಿಸಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೂರ್ವ ವಿಭಾಗದ ಪೊಲೀಸರು, ಕೃತ್ಯ ಎಸಗಿ ತಪ್ಪಿಸಿಕೊಂಡಿದ್ದ ಮೂವರು ಮಹಿಳೆಯರು ಸೇರಿದಂತೆ 12 ಮಂದಿಯನ್ನು ಬಂಧಿಸಿದ್ದರು. 

ತ್ವರಿತವಾಗಿ ಆರೋಪಿಗಳ ವಿಚಾರಣೆ ಮುಗಿಸಿದ ಪೊಲೀಸರು, ನ್ಯಾಯಾಲಯಕ್ಕೆ 1019 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಹಣಕಾಸು ವಿವಾದದ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಮೂಲದ 23 ವರ್ಷದ ಯುವತಿ ಮೇಲೆ ಆಕೆಯ ಪರಿಚಯಸ್ಥರೇ ಭೀಕರವಾಗಿ ಲೈಂಗಿಕವಾಗಿ ಶೋಷಿಸಿದ್ದರು. 

ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಡಿಸಿಪಿ.ಎಸ್.ಡಿ.ಶರಣಪ್ಪ ಮೇಲುಸ್ತುವಾರಿಯಲ್ಲಿ ಬಾಣಸವಾಡಿ ಉಪ ವಿಭಾಗದ ಎಸಿಪಿ ಎಸ್.ಬಿ.ಸಕ್ರಿ ನೇತೃತ್ವದಲ್ಲಿ ತಂಡ ರಚಿಸಿದ್ದರು. ಕೆಲವೇ ತಾಸಿನಲ್ಲೇ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು. ತನಿಖಾ ತಂಡಕ್ಕೆ ರೂ.1ಲಕ್ಷ ಬಹುಮಾನ ಘೋಷಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com