ಕೋವಿಡ್-19: ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14 ಸಾವಿರಕ್ಕಿಂತ ಕಡಿಮೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಬೆಂಗಳೂರಿನ ಸಕ್ರಿಯ ಪ್ರಕರಣಗಳ ಸಂಖ್ಯೆ 14 ಸಾವಿರಕ್ಕಿಂತ ಕೆಳಕ್ಕಿಳಿದಿದ್ದು, 13,890ಕ್ಕೆ ಇಳಿದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಬೆಂಗಳೂರಿನ ಸಕ್ರಿಯ ಪ್ರಕರಣಗಳ ಸಂಖ್ಯೆ 14 ಸಾವಿರಕ್ಕಿಂತ ಕೆಳಕ್ಕಿಳಿದಿದ್ದು, 13,890ಕ್ಕೆ ಇಳಿದಿದೆ.

ನಗರದಲ್ಲಿ ನಿನ್ನೆ 514 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,18,021ಕ್ಕೆ ಏರಿಕೆಯಾಗಿದೆ. ಅಲ್ಲದೆ, ಒಂದೇ ದಿನ 753 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 11,88,419ಕ್ಕೆ ಏರಿಕೆಯಾಗಿದೆ. ಇದರಂತೆ ನಗರದಲ್ಲಿ ಚೇತರಿಕೆ ಪ್ರಮಾಣ ಶೇ.97.54ರಿಂದ ಶೇ.97.56ಕ್ಕೆ ಏರಿಕೆಯಾಗಿದೆ. 

ಇನ್ನು ನಗರದಲ್ಲಿ ನಿನ್ನೆ 9 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 15,711ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಸಾವಿನ ಪ್ರಮಾಣ ಶೇ.1.28ಕ್ಕೆ ತಲುಪಿದೆ. 

ರಾಜ್ಯದಲ್ಲಿ ಜುಲೈ 8 ರಂದು 2,530 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,64,868ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.8.10ರಿಂದ ಶೇ.8.07ಕ್ಕೆ ಇಳಿಕೆಯಾಗಿದೆ. 

ಇನ್ನು ಒಂದೇ ದಿನ 3,344 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೇತರಿಕೆ ಪ್ರಮಾಣ ಶೇ.97.37 ರಿಂದ ಶೇ.97.40ಕ್ಕೆ ಏರಿಕೆಯಾಗಿದೆ. 

24 ಗಂಟೆಗಳಲ್ಲಿ ರಾಜ್ಯದಲ್ಲಿ 62 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 35,663 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಪ್ರಮಾಣ ಪ್ರಮಾಣ ಶೇ.1.24ಕ್ಕೆ ತಲುಪಿದೆ. ಇನ್ನು ಸಕ್ರಿಯ ಪ್ರಕರಣಗಳು 38,729ಕ್ಕೆ ಇಳಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com