ಬೆಳಗಾವಿ: ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಪಿಎಸ್‌ಐ, ಇಬ್ಬರು ಕಾನ್‌ಸ್ಟೆಬಲ್‌ಗಳು ಎಸಿಬಿ ಬಲೆಗೆ

ಪಾನ್‌ ಮಸಾಲಾ ಕಾರ್ಖಾನೆ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್‌ಐ, ಇಬ್ಬರು ಕಾನ್‌ಸ್ಟೆಬಲ್‌ಗಳು ಗುರುವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಎಸಿಬಿ
ಎಸಿಬಿ

ಬೆಳಗಾವಿ: ಪಾನ್‌ ಮಸಾಲಾ ಕಾರ್ಖಾನೆ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್‌ಐ, ಇಬ್ಬರು ಕಾನ್‌ಸ್ಟೆಬಲ್‌ಗಳು ಗುರುವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಠಾಣೆಯ ಪಿಎಸ್‌ಐ ಕುಮಾರ ಹಿತ್ತಲಮನಿ ಹಾಗೂ ಕಾನ್‌ಸ್ಟೆಬಲ್‌ಗಳಾದ ಮಾಯಪ್ಪ ಗಡ್ಡೆ ಮತ್ತು ಶ್ರೀಶೈಲ ಮಂಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಸಿಬಿ ಎಸ್ಪಿ ಬಿ.ಎಸ್ ನೇಮಗೌಡ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಆರೋಪಿಗಳು ಪಾನ್‌ ಮಸಾಲಾ ಕಾರ್ಖಾನೆ ಮಾಲೀಕ ಇಚಲಕರಂಜಿ ಮೂಲದ ರಾಜು ಪಾಶ್ಚಾಪುರೆ ರಿಂದ  50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದಕ್ಕೆ ಪ್ರತಿಯಾಗಿ ಕಾರ್ಖಾನೆ ಮಾಲೀಕರು ಎಸಿಬಿಗೆ ದೂರು ಸಲ್ಲಿಸಿದ್ದಾರೆ. ಆ ದೂರಿನ ನಂತರ ದಾಳಿ ನಡೆಸುವಾಗ ಪಿಎಸ್​ಐ 40,000  ಹಣ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದಿದ್ದಾರೆ.

ಎಸಿಬಿ ಎಸ್ಪಿ ಬಿ.ಎಸ್. ನ್ಯಾಮಗೌಡರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಜೆ.ಎಂ. ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com