ಕೋವಿಡ್-19: ಬೆಂಗಳೂರಿನಲ್ಲಿ 452 ಸೇರಿ ರಾಜ್ಯದಲ್ಲಿಂದು 2162 ಹೊಸ ಪ್ರಕರಣ ದೃಢ, 2879 ಚೇತರಿಕೆ, 48 ಸಾವು

ರಾಜ್ಯದಲ್ಲಿ ಕೊರೋನಾ ಇಳಿಕೆ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2162 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2869320ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2162 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2869320ಕ್ಕೆ ಏರಿಕೆಯಾಗಿದೆ.

2879 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 2796377ಕ್ಕೆ ಏರಿಕೆಯಾಗಿದೆ. 

ಸೋಂಕಿನಿಂದ ಇಂದು 48 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 35779ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 37141 ಸಕ್ರಿಯ ಪ್ರಕರಣಗಳಿವೆ. ಸೋಂಕು ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.1.48 ರಷ್ಟಿದ್ದರೆ, ಮರಣ ಪ್ರಮಾಣ ಶೇ. 2.22 ಆಗಿದೆ.

ಬೆಂಗಳೂರಿನಲ್ಲಿ 452 ಹೊಸ ಪ್ರಕರಣಗಳು ದೃಢಪಟ್ಟಿದ್ದು, 746 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಸಾವಿನ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com