ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ; ಮುಖ್ಯ ಎಂಜಿನಿಯರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ: ಸಚಿವ ಮುರುಗೇಶ್ ನಿರಾಣಿ

ಕೃಷ್ಣ ರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನೀಡಿರುವ ಹೇಳಿಕೆ ಈಗ ಸಂಸದೆ ಮತ್ತು ಜೆಡಿಎಸ್ ನಾಯಕರ ಮಧ್ಯೆ ತೀವ್ರ ವಾಗ್ಯುದ್ಧಗಳಿಗೆ ಕಾರಣವಾಗಿರುವುದರ ಮಧ್ಯೆ ಗಣಿ ಇಲಾಖೆ ಸಚಿವ ಮುರುಗೇಶ್ ನಿರಾಣಿ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.
ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ

ವಿಜಯಪುರ: ಕೃಷ್ಣ ರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನೀಡಿರುವ ಹೇಳಿಕೆ ಈಗ ಸಂಸದೆ ಮತ್ತು ಜೆಡಿಎಸ್ ನಾಯಕರ ಮಧ್ಯೆ ತೀವ್ರ ವಾಗ್ಯುದ್ಧಗಳಿಗೆ ಕಾರಣವಾಗಿರುವುದರ ಮಧ್ಯೆ ಗಣಿ ಇಲಾಖೆ ಸಚಿವ ಮುರುಗೇಶ್ ನಿರಾಣಿ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ, ಖುದ್ದು ಮುಖ್ಯ ಎಂಜಿನಿಯರ್ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ್ದಾರೆ. ನಾನು ಫೋನ್ ಮಾಡಿ ದೃಢಪಡಿಸಿಕೊಂಡಿದ್ದೇನೆ, ಜನರು ಆತಂಕಗೊಳ್ಳಬೇಕಾಗಿಲ್ಲ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯುತ್ತಿಲ್ಲ, ಮಂಡ್ಯ ರಾಜಕಾರಣ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ದಳಪತಿಗಳು ಮತ್ತು ಸಂಸದೆ ಸುಮಲತಾ ಮಧ್ಯೆ ತೀವ್ರ ಮಾತಿಕ ಚಕಮಕಿಯ ಬಗ್ಗೆ ಕೇಳಿದಾಗ ಮಂಡ್ಯ ರಾಜಕಾರಣದ ಬಗ್ಗೆ ನನಗೆ ಗೊತ್ತಿಲ್ಲ, ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.

ಕೆಆರ್ ಎಸ್ ಜಲಾಶಯದಿಂದ 10ಕಿಲೋ ಮೀಟರ್ ಒಳಗೆ ಬೇಬಿ ಬೆಟ್ಟವಿದೆ, ಇಲ್ಲಿ ಗಣಿಗಾರಿಕೆಯಿಂದ ಭೂಮಿ ನಡುಗುವುದರಿಂದ ಜಲಾಶಯಕ್ಕೆ ಹಾನಿಯಾಗಬಾರದೆಂದು ಗಣಿಗಾರಿಕೆ ನಿಲ್ಲಿಸಿದ್ದೇವೆ, ಮತ್ತೆ ಆರಂಭಿಸಲು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ವರದಿ ನೀಡಿದ ಮೇಲೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com