ಬೆಂಗಳೂರು-ಮಂಗಳೂರು ರೈಲಿಗೆ ವಿಸ್ಟಾಡೋಮ್‌ ಬೋಗಿ: ಜು.12ರಿಂದ ಸಂಚಾರ ಆರಂಭ

ಬೆಂಗಳೂರು- ಮಂಗಳೂರು ನಡುವೆ ಸಂಚರಿಸುವ ವಿಶೇಷ ರೈಲಿಗೆ ಉದ್ದೇಶಿತ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್‌ ಬೋಗಿಗಳ ಸೇರ್ಪಡೆಗೊಳಿಸಲಾಗಿದ್ದು, ಜು.12ರಿಂದ ಈ ರೈಲು ಸಂಚಾರ ಆರಂಭವಾಗಲಿದೆ.
ವಿಸ್ಟಾಡೋಮ್‌ ಬೋಗಿ
ವಿಸ್ಟಾಡೋಮ್‌ ಬೋಗಿ

ಬೆಂಗಳೂರು: ಬೆಂಗಳೂರು- ಮಂಗಳೂರು ನಡುವೆ ಸಂಚರಿಸುವ ವಿಶೇಷ ರೈಲಿಗೆ ಉದ್ದೇಶಿತ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್‌ ಬೋಗಿಗಳ ಸೇರ್ಪಡೆಗೊಳಿಸಲಾಗಿದ್ದು, ಜು.12ರಿಂದ ಈ ರೈಲು ಸಂಚಾರ ಆರಂಭವಾಗಲಿದೆ.

ವಿಸ್ಟಾಡೋಮ್‌ ಬೋಗಿಗೆ ಬುಕ್ಕಿಂಗ್‌ ಜು. 7ರಿಂದ ಪ್ರಾರಂಭಗೊಂಡಿದೆ. ಈ ಬೋಗಿಯ ಮೂಲಕ ಸಂಚರಿಸುವಾಗ ಹಗಲು ಹೊತ್ತಿನಲ್ಲಿ ಪ್ರಕೃತಿ ಸೌಂದರ್ಯವನ್ನು ಸವಿಯಬಹುದಾಗಿದೆ.

ಎರಡು ಬೋಗಿಗಳಲ್ಲಿ ಒಟ್ಟು 88 ಸೀಟುಗಳಿದ್ದು, ಶುಕ್ರವಾರ ಸಂಜೆ ವೇಳೆಗೆ 44 ಸೀಟುಗಳು (ರೈಲು ಸಂಖ್ಯೆ 06211) ಬುಕ್ ಆಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳೂರು-ಯಶವಂತಪುರಕ್ಕೆ ಆಗಮಿಸುವ ರೈಲು (06540) ಸಂಪೂರ್ಣ ಬುಕ್ ಆಗಿವೆ. ಈ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಜುಲೈ 11ರಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತದೆ. ಯಶವಂತಪುರಕ್ಕೆ ಆಗಮಿಸುವ ಈ ರೈಲು ಬೆಂಗಳೂರು-ಮಂಗಳೂರಿಗೆ ಮರಳಿ ಜು.12ರಂದು ಸಂಚಾರ ಆರಂಭಿಸಲಿದೆ.

ವಿಸ್ಟಾಡೋಮ್ ಬೋಗಿಗಳಲ್ಲಿ ಕುಳಿತು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಎತ್ತರದ ಪರ್ವತಗಳ ಅದ್ಭುತ ನೋಟ, ಕಣಿವೆಗಳು, ಆಳವಾದ ಕಮರಿಗಳು ಮತ್ತು ಹಚ್ಚ ಹಸಿರಿನ ಈ ಪ್ರದೇಶವು ಮಳೆಗಾಲದ ಸಂದರ್ಭದಲ್ಲಿ ಇನ್ನಷ್ಟು ಸುಂದರ ದೃಶ್ಯಾವಳಿಗಳು ನೋಡುಗರನ್ನು ಬೆರಗುಗೊಳಿಸುತ್ತದೆ.

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಇದೆ. ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್ಎಚ್‌ಪಿನಲ್ಲಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್‌ಫಾರ್ಮ್ / ತಂತ್ರಜ್ಞಾನ) ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ ಹೊಂದಿದೆ.

ಬೋಗಿಯಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್‌ಗಳಿವೆ. ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.

ಯಾವ ರೈಲುಗಳಲ್ಲಿದೆ ಈ ವ್ಯವಸ್ಥೆ...? 
ವಾರಕ್ಕೆ 3 ಬಾರಿ ಚಲಿಸುವ ಯಶವಂತಪುರ- ಕಾರವಾರ ವಿಶೇಷ ರೈಲು (ರೈಲ್ವೆ ನಂ. 06211 /06212), ವಾರಕ್ಕೆ 3 ಬಾರಿ ಚಲಿಸುವ ಯಶವಂತಪುರ- ಮಂಗಳೂರು ಜಂಕ್ಷನ್‌ ವಿಶೇಷ ರೈಲು (ರೈಲ್ವೆ ನಂ. 06575/06576), ಯಶವಂತಪುರ -ಮಂಗಳೂರು (ರೈಲ್ವೆ ನಂ. 06539) ಹಾಗೂ ಮಂಗಳೂರು ಜಂಕ್ಷನ್‌-ಯಶವಂತಪುರ ಎಕ್ಸ್‌ಪ್ರೆಸ್‌ನಲ್ಲಿ (ರೈಲ್ವೆ ನಂ. 06540 ) ವಿಸ್ಟಾಡೋಮ್‌ ಬೋಗಿ ಸೇರ್ಪಡೆಯಾಗಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com