ಮೈಸೂರು: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

ಮಾನಸಿಕ ಚಿಕಿತ್ಸೆಗೆಂದು ಮೈಸೂರು ಕೆಆರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಮಾನಸಿಕ ಚಿಕಿತ್ಸೆಗೆಂದು ಮೈಸೂರು ಕೆಆರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಅಸ್ವಸ್ಥಗೊಂಡ ನಿರಾಶ್ರಿತರ ವಾರ್ಡ್‌ನಲ್ಲಿ ಇದ್ದ 37 ವರ್ಷ ವಯಸ್ಸಿನ ಮಹಿಳೆಯೊಬ್ಬರ ಮೇಲೆ ಕಳೆದ ಶನಿವಾರ (ಜುಲೈ 3) ರಾತ್ರಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಮಾನವ ಹಕ್ಕುಗಳ ಸೇವಾ ಸಮಿತಿ ಸದಸ್ಯರು ದೂರು ನೀಡಿದ್ದಾರೆ‌. ದೂರು ದಾಖಲಿಸಿಕೊಂಡ ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಮೇಲ್ನೋಟಕ್ಕೆ ಕಿಟಕಿ ಮುರಿದಿರುವುದು ಕಂಡು ಬಂದಿದೆ‌. ಆದರೆ, ಅತ್ಯಾಚಾರ ನಡೆದಿರುವ ಕುರಿತು ಮಹಿಳೆಯಾಗಲಿ, ವಾರ್ಡ್‌ನಲ್ಲಿರುವ ಇತರೆ ರೋಗಿಗಳಾಗಲಿ ಹೇಳಿಕೆ ನೀಡುತ್ತಿಲ್ಲ. ಭದ್ರತಾ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಈ ವೇಳೆ ಕಿಟಕಿ ಮುರಿದಿರುವುದು ಕಂಡು ಬಂದಿದೆ. ಬಳಿಕ ಆಸ್ಪತ್ರೆಯ ಆಡಳಿತ ಮಂಡಳಿ ಕಿಟಕಿಯ ದುರಸ್ತಿ ಕಾರ್ಯ ನಡೆಸಿ, ಏನೂ ಆಗದಂತೆ ವರ್ತಿಸಿದೆ. ಈ ನಡುವೆ ಆಸ್ಪತ್ರೆಯ ಆಡಳಿತ ಮಂಡಳಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆಂದು ಮಾನವ ಹಕ್ಕುಗಳ ಸೇವಾ ಸಮಿತಿ ಸದಸ್ಯರು ಆರೋಪಿಸಿದ್ದಾರೆ. 

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಬಳಿಕ ಇದೀಗ ಮಹಿಳೆಯನ್ನು ವಿಶೇಷ ಆರೈಕೆ ಕೇಂದ್ರಕ್ಕೆ ಆಸ್ಪತ್ರೆಯ ಆಡಳಿತ ಮಂಡಳಿ ಸ್ಥಳಾಂತರಿಸಿದೆ. 

ಈ ನಡುವೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಶಾಸಕ ಎಲ್.ನಾಗೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಆಸ್ಪತ್ರೆಯ ಸಿಬ್ಬಂದಿಗಳಿಗೆ ಕಠಿಣ ಎಚ್ಚರಿಕೆನೀಡಿದ್ದಾರೆ. ಅಲ್ಲದೆ, ಆಸ್ಪತ್ರೆಯ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಭರವಸೆಯನ್ನು ನೀಡಿದ್ದಾರೆ. 

ಘಟನೆ ಸಂಬಂಧ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಭದ್ರತಾ ಸಿಬ್ಬಂದಿಯೊಬ್ಬನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಸಿಸಿಟವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com