ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ: ಸಚಿವ ಸುರೇಶ್ ಕುಮಾರ್

ಡಿಜಿಟಲ್ ಶಿಕ್ಷಣ  ಇಲ್ಲವೇ ಆನ್ ಲೈನ್ ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಎಸ್ . ಸುರೇಶ್ ಕುಮಾರ್
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಎಸ್ . ಸುರೇಶ್ ಕುಮಾರ್

ಬೆಂಗಳೂರು: ಡಿಜಿಟಲ್ ಶಿಕ್ಷಣ  ಇಲ್ಲವೇ ಆನ್ ಲೈನ್ ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಸಂಬಂಧಸೋಮವಾರ ಮುಖ್ಯಮಂತ್ರಿಗಳ ಸಲಹೆಗಾರರಾದ ಪ್ರಶಾಂತ್ ಪ್ರಕಾಶ್ ಮತ್ತು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ದೊರೆಸ್ವಾಮಿಯ ಅವರೊಂದಿಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಚರ್ಚಿಸಿದ ಸಚಿವರು, ರಾಜ್ಯದಲ್ಲಿರುವ 5766 ಗ್ರಾಮಪಂಚಾಯ್ತಿ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ ಎಂದು ತಿಳಿಸಿದರು. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ  ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ ಎಂದು ಸಚಿವರು ಹೇಳಿದರು.

ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಉತ್ತಮಗೊಳಿಸುವುದು ಸೇರಿದಂತೆ ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಕುರಿತಂತೆ  ಎಸ್ ಎಸ್ ಎಲ್ ಸಿ ಪರೀಕ್ಷಾವಧಿ ಮುಗಿದ ಕೂಡಲೇ ಆರ್.ಡಿ.ಪಿ.ಆರ್. ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಶಿಕ್ಷಣ ಇಲಾಖೆಯ ಟಾಸ್ ಫೋರ್ಸ್ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಪ್ರಾಯೋಗಿಕ ಕ್ರಮಗಳ ಕುರಿತಂತೆ ಕ್ರಿಯಾಯೋಜನೆ ರೂಪಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.  ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com