ಗದಗ: ಜಿಲ್ಲಾ-ತಾಲೂಕು ಪಂಚಾಯಿತಿ ಟಿಕೆಟ್ ಗಾಗಿ ಆಕಾಂಕ್ಷಿಗಳ ಆನ್ ಲೈನ್ ಕ್ಯಾಂಪೇನ್

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಟಿಕೆಟ್ ಗಾಗಿ ಆಕಾಂಕ್ಷಿಗಳು ಸಾಮಾಜಿಕ ಮಾಧ್ಯಮದಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗದಗ: ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಟಿಕೆಟ್ ಗಾಗಿ ಆಕಾಂಕ್ಷಿಗಳು ಸಾಮಾಜಿಕ ಮಾಧ್ಯಮದಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.

ಮೀಸಲಾತಿ ಪಟ್ಟಿ ಪ್ರಕಟವಾದ ನಂತರ ಚುನಾವಣಾ ದಿನಾಂಕ ಘೋಷಿಸಲಾಗುತ್ತದೆ. ಆಕಾಂಕ್ಷಿಗಳು, ಬೆಂಬಲಿಗರು ಮತ್ತು ರಾಜಕೀಯ ನಾಯಕರುಗಳು ತಮಗೆ ಟಿಕೆಟ್ ನೀಡುವಂತೆ ಒತ್ತಾಯಿಸಲು ಆನ್ ಲೈನ್ ಪ್ರಚಾರ ಕಾರ್ಯಕ್ರಮ ಆರಂಭಿಸಿದ್ದಾರೆ.

ಹೆಚ್ಚಿನ ಜನರ ಗಮನ ಸೆಳೆಯುವ ಸಲುವಾಗಿ ಆಕಾಂಕ್ಷಿಗಳು ತಮ್ಮ ಕೆಲಸಗಳು ಮತ್ತು ಸಾಧನೆಗಳನ್ನು ಪ್ರದರ್ಶಿಸುವ ವೀಡಿಯೊಗಳು ಮತ್ತು ಫೋಟೋಗಳನ್ನು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಇತರರ ಮೂಲಕ ಪ್ರಚಾರ ಮಾಡುತ್ತಿದ್ದಾರೆ. ಕೋವಿಡ್ ಕಾರಣದಿಂದ ಮೊದಲಿನಂತೆ ಮನೆ ಮನೆಗೆ ತೆರಳಲು ಸಾಧ್ಯವಾಗದ ಕಾರಣ ಕೆಲವರು ಆನ್ ಲೈನ್ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಕೋವಿಡ್ ಎರಡನೇ ಅಲೆಯ ಕಾರಣ ನಾವು ರ್ಯಾಲಿಗಳು ಮತ್ತು ಸಭೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ವಾಟ್ಸಾಪ್ ಗ್ರೂಪ್ ರಚಿಸಿ ಅದರಲ್ಲಿ ನಮ್ಮ ಕೆಲಸ ಮತ್ತು ಸಾಧನೆಗಳ ವಿಡಿಯೋವನ್ನು ಶೇರ್ ಮಾಡುತ್ತಿದ್ದೇವೆ ಎಂದು ಟಿಕೆಟ್ ಆಕಾಂಕ್ಷಿ ಎಜಿ ಸಂಧಿಗೌಡರ್ ಹೇಳಿದ್ದಾರೆ.

ಮನೆಯಲ್ಲಿಯೇ ಕುಳಿತು ಆನ್ ಲೈನ್ ಪ್ರಚಾರ ಮಾಡುವುದು ಸುರಕ್ಷಿತ ಎಂದೇ ಭಾವಿಸಿದ್ದಾರೆ ಎಂದು ತಿಳಿಸಿದ್ದಾರೆ, ಇದರ ಜೊತೆಗೆ ಯಾವುದೇ ಸಭೆ ನಡೆಸದಂತೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಜಿಲ್ಲಾ ಪಂಚಾಯಿತಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com