ರಾಮದಾಸ್ ಅಠಾವಳೆ
ರಾಮದಾಸ್ ಅಠಾವಳೆ

ಮುಸ್ಲಿಮರಲ್ಲಿ ಮೂರ್ನಾಲ್ಕು ಮದುವೆ ಆಗುವ ಪರಿಪಾಠದಿಂದ ಮಕ್ಕಳ ಸಂಖ್ಯೆ ಹೆಚ್ಚಾಗಿದೆ: ರಾಮದಾಸ್ ಅಠಾವಳೆ 

ಎಲ್ಲ ಸಮುದಾಯಗಳಲ್ಲಿ ಇರುವ ಹಿಂದುಳಿದ ಮತ್ತು ಬಡ ಜನರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಅದಕ್ಕೆ ಪೂರಕವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದರು.

ಬೆಂಗಳೂರು: ಎಲ್ಲ ಸಮುದಾಯಗಳಲ್ಲಿ ಇರುವ ಹಿಂದುಳಿದ ಮತ್ತು ಬಡ ಜನರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಅದಕ್ಕೆ ಪೂರಕವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದರು. 

ಉತ್ತರ ಪ್ರದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕರಡು ವಿದೇಯಕ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಸ್ಲಿಮರ ಜನಸಂಖ್ಯೆ ದಿಢೀರ್ ಹೆಚ್ಚಾಗಿದೆ. ಮುಸ್ಲಿಮರಲ್ಲಿ ಮೂರ್ನಾಲ್ಕು ಮದುವೆ ಆಗುವ ಪರಿಪಾಠ ಇದೆ. ಹೀಗಾಗಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಅನಿವಾರ್ಯವಾಗಿದೆ. ಹೀಗಾಗಿ ಮುಸ್ಲಿಮರಲ್ಲಿ ಜನಸಂಖ್ಯೆ ಹೆಚ್ಚಳ ತಗ್ಗಿಸಲು ಈ ನಿಯಮ ತರಲಾಗುತ್ತಿದೆ ಎಂದು ಅಠವಾಳೆ ಹೇಳಿದ್ದಾರೆ.

ಮೀಸಲಾತಿಯ ಪ್ರಮಾಣ ಶೇಕಡ 50 ರಷ್ಟನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಲು ಮೀಸಲಾತಿ ಹೆಚ್ಚಿಸಲೇಬೇಕಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ' ಎಂದರು.

ಮೀಸಲಾತಿ ಪ್ರಮಾಣ ಹೆಚ್ಚಿಸಲು ಸಂವಿಧಾನದ ತಿದ್ದುಪಡಿ ಆಗಬೇಕಿದೆ. ಸಂವಿಧಾನದ 102ನೇ ವಿಧಿಯ ಪ್ರಕಾರ, ರಾಜ್ಯಗಳಿಗೂ ಮೀಸಲಾತಿ ನೀಡುವ ಅಧಿಕಾರವಿದೆ. ಈ ಎಲ್ಲವನ್ನೂ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. ಯಾವುದೇ ಸಮುದಾಯದ ಬಡವರು, ಹಿಂದುಳಿದವರು ಮಾತ್ರ ಮೀಸಲಾತಿ ‌ಸೌಲಭ್ಯ ಪಡೆಯಬೇಕು. ಆದರೆ, ಅನರ್ಹರೇ ಮೀಸಲಾತಿ ಪಡೆಯುತ್ತಿರುವುದು ಹೆಚ್ಚುತ್ತಿದೆ. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ‌ ಮೀಸಲಾತಿಯನ್ನು ಆ ವರ್ಗದಲ್ಲಿರುವ ಆರ್ಥಿಕವಾಗಿ ಬಲಾಢ್ಯರಾದವರೇ ಪಡೆಯುತ್ತಿದ್ದಾರೆ. ಅದನ್ನು ತಪ್ಪಿಸಲು ಕ್ರಮದ ಅಗತ್ಯವಿದೆ ಎಂದರು. ‘ದೇಶದಾದ್ಯಂತ ಜಾತಿವಾರು ಜನಗಣತಿ ನಡೆಸಬೇಕಿದೆ. ಅದರಿಂದ ಆಯಾ ಸಮುದಾಯಗಳ ಜನರಿಗೆ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ನ್ಯಾಯ ದೊರಕಿಸಲು ಸಾಧ್ಯವಾಗುತ್ತದೆ. ದೇಶದಾದ್ಯಂತ ಜಾತಿವಾರು ಜನಗಣತಿ ನಡೆಸುವಂತೆ ಪ್ರಧಾನಿಯವರನ್ನು ಒತ್ತಾಯಿಸುತ್ತೇನೆ’ ಎಂದು ಅಠಾವಳೆ ಹೇಳಿದರು.

ಸದ್ಯ ದೇಶದಲ್ಲಿ ಸದ್ದು ಮಾಡುತ್ತಿರುವ ಜಾತಿಗಣತಿ ಕುರಿತು ಅಠಾವಳೆ ಪ್ರತಿಕ್ರಿಯಿಸಿದ್ದಾರೆ. ಜಾತಿ ಗಣತಿಯಿಂದ ಕೋಮುವಾದ ಹೆಚ್ಚಾಗುವುದಿಲ್ಲ. ಜಾತಿ ಗಣತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ವಿಚಾರದಲ್ಲಿ ಅನಕೂಲ ಆಗಲಿದೆ. ಆಯಾ ಜಾತಿಯವರು ಪ್ರಮಾಣ ಎಷ್ಟಿದೆ ಎಂದು ತಿಳಿಯಲಿದೆ. ಇದರಿಂದ ಸೌಲಭ್ಯಗಳ ಹಂಚಿಕೆ ಸುಲಭವಾಗಲಿದೆ ಎಂದಿದ್ದಾರೆ. ಆದರೆ ಆರ್ಥಿಕವಾಗಿ ಹಿಂದುಳಿದವರಿಗೆ, ದುರ್ಬಲರಿಗೆ ಅನಕೂಲಗಳು ಸಿಗಬೇಕು, ಉಳ್ಳವರಿಗಲ್ಲ ಎಂದು ಅಠಾವಳೆ ಹೇಳಿದ್ದಾರೆ

Related Stories

No stories found.

Advertisement

X
Kannada Prabha
www.kannadaprabha.com