ಪರಸ್ಪರ ಒಪ್ಪಿಗೆಯ ಮೂಲಕ ಅನುಭವ ಮಂಟಪಕ್ಕೆ ಭೂಮಿ ಪಡೆಯಿರಿ: ಬಿಎಸ್‌ವೈ

 ಭೂಪರಿಹಾರದ ಬಗ್ಗೆ ಮಾತುಕತೆ ನಡೆಸಿದ ನಂತರ ಪರಸ್ಪರ ಒಪ್ಪಿಗೆಯ ಮೂಲಕ ಬಸವಕಲ್ಯಾಣದಲ್ಲಿ 500 ಕೋಟಿ ರೂ.ಗಳ ಅನುಭವ ಮಂಟಪ ಯೋಜನೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಖ್ಯಮಂತ್ರಿಗಳ ಸಭೆ
ಮುಖ್ಯಮಂತ್ರಿಗಳ ಸಭೆ

ಬೆಂಗಳೂರು: ಭೂಪರಿಹಾರದ ಬಗ್ಗೆ ಮಾತುಕತೆ ನಡೆಸಿದ ನಂತರ ಪರಸ್ಪರ ಒಪ್ಪಿಗೆಯ ಮೂಲಕ ಬಸವಕಲ್ಯಾಣದಲ್ಲಿ 500 ಕೋಟಿ ರೂ.ಗಳ ಅನುಭವ ಮಂಟಪ ಯೋಜನೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಯೋಜನೆಗಾಗಿ ರಾಜ್ಯ ಸರ್ಕಾರ 500 ಕೋಟಿ ರೂ. ವೆಚ್ಚವಾಗಲಿದ್ದು ಪ್ರಸಕ್ತ ಹಣಕಾಸು ವರ್ಷದಲ್ಲಿ 101 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪಕ್ಕೆ 200 ಕೋಟಿ ರೂ. ಮೀಸಲಿರಿಸಲಾಗಿದೆ. ಅಲ್ಲದೆ ದಾನಿಗಳು 11.25 ಎಕರೆ ದೇಣಿಗೆ ನೀಡಿದ್ದರೆ, ಸರ್ಕಾರವು 69 ಎಕರೆಗಳನ್ನು ರೈತರಿಂದ ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ರೈತರು ತಮ್ಮ ಭೂಮಿಗೆ ಹೆಚ್ಚಿನ ಬೆಲೆ ನೀಡಬೇಕೆಂದು ಒತ್ತಾಯಿಸುತ್ತಿರುವುದರಿಂದ ಭೂಸ್ವಾಧೀನ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.

2021-22ರ ಕ್ರಿಯಾ ಯೋಜನೆಯನ್ನು ಅಂಗೀಕರಿಸಿದ ಬಸವಕಲ್ಯಾಣ್ ಅಭಿವೃದ್ಧಿ ಮಂಡಳಿ ಸಭೆಯಲ್ಲಿ, ಪರಸ್ಪರ ಒಪ್ಪಿಗೆಯ ಮೂಲಕ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಅಂತಿಮಗೊಳಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಪ್ರಸ್ತುತ, ಯೋಜನಾ ಸ್ಥಳದಲ್ಲಿ ಮಣ್ಣಿನ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಸಂಗೊಳ್ಳಿ ರಾಯಣ್ನ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ ಸಿಎಂ, ಹಣಕಾಸಿನ ಕಾರ್ಯಯೋಜನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ ಬಜೆಟ್‌ನಲ್ಲಿ 62 ಕೋಟಿ ರೂ. ತೆಗೆದಿರಿಸಲಾಗಿದೆ.

21 ಕೋಟಿ ರೂ.ಗೆ ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸಲು ಸಭೆ ಅನುಮೋದನೆ ನೀಡಿದೆ. ರಾಯಣ್ಣ ಅವರ ಜನ್ಮಸ್ಥಳವಾದ ಸಂಗೊಳ್ಳಿಯಲ್ಲಿ ಮಿಲಿಟರಿ ಶಾಲೆಯ ನಿರ್ಮಾಣ ಪೂರ್ಣಗೊಂಡಿದೆ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು, ಶಿಕ್ಷಕರು ಮತ್ತು ಇತರ ಸಿಬ್ಬಂದಿಗಳ ನೇಮಕಾತಿಗಾಗಿ ರಕ್ಷಣಾ ಸಚಿವಾಲಯದೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವಂತೆ ಸಿಎಂ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆ ತಿಳಿಸಿದೆ.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ, ಪ್ರಾಧಿಕಾರವು ಕೈಗೊಂಡ 14 ಕೋಟಿ ರೂ. ವಿವಿಧ ಕಾರ್ಯಗಳಿಗೆ ನುಮೋದಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com