ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇದೇ 16 ರವರೆಗೆ ರಾಜ್ಯದೆಲ್ಲೆಡೆ ವರ್ಷಧಾರೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ ಇದೆ ಭಾರಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ ಇದೆ ಭಾರಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ-ಒಳನಾಡು ಮತ್ತು ದಕ್ಷಿಣ ಒಳನಾಡಿನ ಅನೇಕ ಕಡೆ ಇದೇ 16 ರವರೆಗೂ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಪ್ರದೇಶದಲ್ಲಿ ಭಾನುವಾರದಿಂದಲೆ ಮಳೆಯಾಗುತ್ತಿದ್ದು ಇದರಿಂದ ವ್ಯವಸಾಯಕ್ಕೆ ಭೂಮಿ ಹದ ಮಾಡಿಕೊಂಡು ಮಳೆಗಾಗಿಯೇ ಕಾಯುತ್ತಿದ್ದ, ರೈತಾಪಿ ಸಮುದಾಯಕ್ಕೆ ನೆಮ್ಮದಿ ದೊರಕಿದಂತಾಗಿದೆ. ಈ ಭಾರಿ ದೇಶದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com