10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಸಾರಿಗೆ ವ್ಯವಸ್ಥೆ 

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ. ವಿದ್ಯಾರ್ಥಿಗಳ ಅಗತ್ಯತೆಗಳನ್ನು ಮನಗಂಡು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುತ್ತಿದೆ.
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂಕೇತಿಕ ಚಿತ್ರ)
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂಕೇತಿಕ ಚಿತ್ರ)

ಬೆಂಗಳೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ. ವಿದ್ಯಾರ್ಥಿಗಳ ಅಗತ್ಯತೆಗಳನ್ನು ಮನಗಂಡು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುತ್ತಿದೆ.

ಪರೀಕ್ಷಾ ಕೇಂದ್ರದಿಂದ ಮನೆಗೆ ತೆರಳಲು ಉಚಿತ ಸಾರಿಗೆ ವ್ಯವಸ್ಥೆ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪ್ರದೇಶದಲ್ಲಿ ನಿಲುಗಡೆ ನೀಡಲು ಸೂಚಿಸಲಾಗಿದೆ. 

ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಕಡ್ಡವಾಗಿ ಹಾಲ್ ಟಿಕೆಟ್ ನ್ನು ತಮ್ಮ ಜೊತೆ ಕೊಂಡೊಯ್ಯಬೇಕು ಎಂದು ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಜ್ಯೋತಿ ಕಳಸದ್ ಹೇಳಿದ್ದಾರೆ. ರಾಜ್ಯದಲ್ಲಿ ಜುಲೈ 19 ರಿಂದ 22 ವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com