ಪ್ರಸಕ್ತ ವರ್ಷ 25 ಲಕ್ಷ ಹೊಸ ಕೊಳವೆ ನೀರು ಸಂಪರ್ಕ: ಮುಖ್ಯಮಂತ್ರಿ ಯಡಿಯೂರಪ್ಪ 

ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ 25 ಲಕ್ಷ ಹೊಸ ಕೊಳವೆ ನೀರು ಸಂಪರ್ಕವನ್ನು ಒದಗಿಸಲಾಗುವುದು ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಮುಂದೆ ರಾಜ್ಯ ಸರ್ಕಾರ ಭರವಸೆ ನೀಡಿದೆ.
ವಿಧಾನಸೌಧದಲ್ಲಿ ನಡೆದ ಪರಾಮರ್ಶೆ ಸಭೆಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ
ವಿಧಾನಸೌಧದಲ್ಲಿ ನಡೆದ ಪರಾಮರ್ಶೆ ಸಭೆಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ 25 ಲಕ್ಷ ಹೊಸ ಕೊಳವೆ ನೀರು ಸಂಪರ್ಕವನ್ನು ಒದಗಿಸಲಾಗುವುದು ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಮುಂದೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಹಣಕಾಸಿನ ಸಮಸ್ಯೆಯಿದ್ದರೂ ಕೂಡ ರಾಜ್ಯ ಸರ್ಕಾರ ಹೊಸ ನೀರಿನ ಸಂಪರ್ಕ ಕಲ್ಪಿಸಲಿದೆ. ಜಲ ಜೀವನ್ ಮಿಷನ್ ಯೋಜನೆಯಡಿ ರಾಜ್ಯ ಸರ್ಕಾರದ ಸಾಧನೆಯನ್ನು ನಿನ್ನೆ ಸಭೆಯಲ್ಲಿ ಪರಾಮರ್ಶೆ ನಡೆಸಲಾಯಿತು. ಕರ್ನಾಟಕ ಸರ್ಕಾರದ ಕೆಲಸ ಪ್ರಶಂಸನೀಯವಾಗಿದೆ ಎಂದು ಹೇಳಿದರು. 

ಕೇಂದ್ರ ಸರ್ಕಾರ ಇತ್ತೀಚೆಗೆ ಅನುದಾನದಲ್ಲಿ ನಾಲ್ಕು ಪಟ್ಟು ಹೆಚ್ಚು ಮಾಡಿದ್ದು ರಾಜ್ಯಕ್ಕೆ ನಿಗದಿತ ಸಮಯಕ್ಕೆ ಗುರಿ ತಲುಪಲು ಸಾಧ್ಯವಾಗಿದೆ. ಮನೆಗಳಿಗೆ 25 ಲಕ್ಷ ಕೊಳವೆ ನೀರಿನ ಸಂಪರ್ಕದ ಗುರಿ ತಲುಪುವಲ್ಲಿ ಮುಖ್ಯಮಂತ್ರಿಗಳ ಪ್ರಯತ್ನವನ್ನು ನಾನು ಪ್ರಶಂಸಿಸುತ್ತೇನೆ ಎಂದು ಕೇಂದ್ರ ಸಚಿವ ಶೇಖಾವತ್ ಹೇಳಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿ ಮನೆಗಳಿಗೆ ನೀರಿನ ಸಂಪರ್ಕ ಒದಗಿಸುವ ಗುರಿಯನ್ನು ಪ್ರಧಾನ ಮಂತ್ರಿಗಳು ಹಾಕಿಕೊಂಡಿದ್ದಾರೆ. ಪ್ರಧಾನಿಗಳ ಕನಸನ್ನು ಶೀಘ್ರವೇ ನೆರವೇರಿಸಲು 25 ಲಕ್ಷ ಹೊಸ ಕೊಳವೆ ನೀರಿನ ಸಂಪರ್ಕವನ್ನು ಮನೆಗಳಿಗೆ ನೀಡಲಿದ್ದೇವೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಿರೀಕ್ಷೆಗೆ ತಕ್ಕಂತೆ ದೇಶದಲ್ಲಿ ಪ್ರತಿ ಮನೆಗಳಿಗೆ ಇದುವರೆಗೆ ಕೊಳವೆ ನೀರಿನ ಸಂಪರ್ಕ ಒದಗಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಯೋಜನೆಯಡಿ, ಕೇಂದ್ರ ಸರ್ಕಾರ 2024ರ ಹೊತ್ತಿಗೆ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ಕಾರ್ಯನಿರ್ವಹಣೆಯ ಮನೆಗಳಿಗೆ ಕೊಳವೆ ನೀರು ಸಂಪರ್ಕವನ್ನು 15.70 ಕೋಟಿಯಷ್ಟು ನೀಡಲು ಕೇಂದ್ರ ಸರ್ಕಾರ ಉದ್ದೇಶ ಹೊಂದಿದೆ ಎಂದು ಶೇಖಾವತ್ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com