ಬೆಂಗಳೂರು ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾಗಿ ಅಂಜುಮ್ ಪರ್ವೇಜ್ ನೇಮಕ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಅಂಜುಮ್ ಪರ್ವೇಜ್ ಅವರನ್ನು ನೇಮಕ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಅಂಜುಮ್ ಪರ್ವೇಜ್ ಅವರನ್ನು ನೇಮಕ ಮಾಡಲಾಗಿದೆ.

ಹಿರಿಯ ಐಎಎಸ್ ಅಧಿಕಾರಿ ಅಂಜುಮ್ ಪರ್ವೇಜ್​ ಅವರನ್ನು ಬೆಂಗಳೂರು ಮೆಟ್ರೋ ಎಂಡಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 

ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಪರ್ವೇಜ್, ಕರ್ನಾಟಕ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರದಿಂದ ಬಿಎಮ್​ಆರ್​ಸಿಎಲ್ ಎಂಡಿ ಆಗಿ ನೇಮಕಾತಿ ಹೊಂದಿದ್ದಾರೆ.

ಕರ್ನಾಟಕ ಕೇಡರ್‌ನ 1994ರ ಬ್ಯಾಚ್‌ ಅಧಿಕಾರಿಯಾಗಿರುವ ಪರ್ವೇಜ್‌, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ, ಜಲಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರುವ ಅಂಜುಂ ಪರ್ವೇಜ್‌, ಬಿಎಂಆರ್‌ಸಿಎಲ್‌ನ ಏಳನೇ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. 

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅಂಜುಮ್ ಪರ್ವೇಜ್ ಅವರು, ನನ್ನ ಅಧಿಕಾರಾವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡುವುದರತ್ತ ನಾನು ಗಮನಹರಿಸುತ್ತೇನೆಂದು ಹೇಳಿದ್ದಾರೆ. 

ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜಯ್ ಸೇಠ್ ಅವರು, ಕೇಂದ್ರದ ಹಣಕಾಸು ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ನಂತರ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರಿಗೆ ಹೆಚ್ಚುವರಿಯಾಗಿ ಬಿಎಂಆರ್‌ಸಿಎಲ್‌ನ ಹೊಣೆ ನೀಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com