ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪೈಲಟ್ ತರಬೇತಿ ಕೇಂದ್ರ ಸ್ಧಾಪನೆ

ಹೈದರಾಬಾದ್ ಮೂಲದ ಏಷ್ಯಾ ಪೆಸಿಫಿಕ್ ಫ್ಲೈಟ್ ಟ್ರೈನಿಂಗ್ (ಎಪಿಎಫ್‌ಟಿ) ಕರ್ನಾಟಕದ ಕಲಬುರಗಿ ವಿಮಾನ ನಿಲ್ದಾಣದಲ್ಲಿ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೈದರಾಬಾದ್ : ಹೈದರಾಬಾದ್ ಮೂಲದ ಏಷ್ಯಾ ಪೆಸಿಫಿಕ್ ಫ್ಲೈಟ್ ಟ್ರೈನಿಂಗ್ (ಎಪಿಎಫ್‌ಟಿ) ಕರ್ನಾಟಕದ ಕಲಬುರಗಿ ವಿಮಾನ ನಿಲ್ದಾಣದಲ್ಲಿ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲಿದೆ.

ಪತ್ರಿಕಾ ಪ್ರಕಟಣೆಯ ಪ್ರಕಾರ, ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಅನುಮೋದಿತ ವಾಯುಯಾನ ಅಕಾಡೆಮಿಯು ಇತ್ತೀಚೆಗೆ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಯೊಂದಿಗೆ ವಿನ್ಯಾಸ, ನಿರ್ಮಾಣ, ಕಾರ್ಯಾಚರಣೆ, ನಿರ್ವಹಣೆ ಮತ್ತು ವರ್ಗಾವಣೆ (ಡಿಬಿಒಎಂಟಿ) ಕುರಿತು ವಿಮಾನ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲು ಒಪ್ಪಂದ ಮಾಡಿಕೊಂಡಿದೆ. 

25 ವರ್ಷಗಳ ಒಪ್ಪಂದದ ಕರಾರು ಪತ್ರಕ್ಕೆ ಎಪಿಎಫ್ ಟಿ ಸಿಇಒ ಡಿಪಿ ಹೇಮಂತ್ ಮತ್ತು ಕಲಬುರಗಿ ವಿಮಾನ ನಿಲ್ದಾಣ ನಿರ್ದೇಶಕ ಜ್ಞಾನೇಶ್ವರ್ ರಾವ್ ಸಹಿ ಮಾಡಿದ್ದಾರೆ. 

2025 ರ ವೇಳೆಗೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ವಿಮಾನಯಾನ ಮಾರುಕಟ್ಟೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಭಾರತದಲ್ಲಿ ಸುಶಿಕ್ಷಿತ ಪೈಲಟ್‌ಗಳಿಗೆ ಭಾರಿ ಅವಶ್ಯಕತೆಯಿದೆ. 

2024-25ರ ವೇಳೆಗೆ ಭಾರತಕ್ಕೆ 9488 ಪೈಲಟ್‌ಗಳ ಅಗತ್ಯವಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ 2020 ರ ಸೆಪ್ಟೆಂಬರ್‌ನಲ್ಲಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com