ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ದಂಡ!

ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಬೆಂಗಳೂರು ಮೆಟ್ರೋ ರೈಲಿ ನಿಗಮ (ಬಿಎಂಆರ್'ಸಿಎಲ್)ದ ಅಧಿಕಾರಿಗಳು, ಮೆಟ್ರೋ ರೈಲು ಹಾಗೂ ನಿಲ್ದಾಣದಲ್ಲಿ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 
ಮಾಸ್ಕ್ ಸೂಕ್ತ ರೀತಿಯಲ್ಲಿ ಧರಿಸಿದ ಪ್ರಯಾಣಿಕನಿಗೆ ದಂಡ ವಿಧಿಸುತ್ತಿರುವ ಭದ್ರತಾ ಸಿಬ್ಬಂದಿ
ಮಾಸ್ಕ್ ಸೂಕ್ತ ರೀತಿಯಲ್ಲಿ ಧರಿಸಿದ ಪ್ರಯಾಣಿಕನಿಗೆ ದಂಡ ವಿಧಿಸುತ್ತಿರುವ ಭದ್ರತಾ ಸಿಬ್ಬಂದಿ

ಬೆಂಗಳೂರು: ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಬೆಂಗಳೂರು ಮೆಟ್ರೋ ರೈಲಿ ನಿಗಮ (ಬಿಎಂಆರ್'ಸಿಎಲ್)ದ ಅಧಿಕಾರಿಗಳು, ಮೆಟ್ರೋ ರೈಲು ಹಾಗೂ ನಿಲ್ದಾಣದಲ್ಲಿ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 

ಇದರಂತೆ ಸೂಕ್ತ ರೀತಿಯಲ್ಲಿ ಮಾಸ್ಕ್ ಧರಿಸಿದ 3,084 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಟ್ಟು 7,63,070 ದಂಡ ಸಂಗ್ರಹಿಸಿದ್ದಾರೆ. 

ಜನರು ಸುರಕ್ಷತೆಗಾಗಿ ಕೋವಿಡ್ ನಿಯಮ ಪಾಲನೆ ಮಾಡುವಂತೆ ಮಾಡಲು ನಾವು ದಂಡಾಸ್ತ್ರ ಪ್ರಯೋಗಿಸುತ್ತಿದ್ದೇವೆ. ಸುರಕ್ಷಿತ ಪ್ರಯಾಣ ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಬಿಎಂಆರ್'ಸಿಎಲ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ಎಲ್.ಯಶವಂತ್ ಚಾವಣ್ ಅವರು ಹೇಳಿದ್ದಾರೆ. 

ಜುಲೈ 13 ರಂದು ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು, ಒಟ್ಟು 189 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗಿತ್ತು ಎಂದು ಬಿಎಂಆರ್ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ ಎ.ಎಸ್.ಶಂಕರ್ ಅವರು ಹೇಳಿದ್ದಾರೆ. 

ಆದಾಯದ ಕುರಿತು ಪ್ರತಿಕ್ರಿಯೆ ನೀಡಿರುವ ಶಂಕರ್ ಅವರು, ಇತ್ತೀಚಿನ ದಿನಗಳಲ್ಲಿ ನಮ್ಮ ಮಟ್ರೋ ದೈನಂದಿನ ಆದಾಯ ರೂ.25-30 ಲಕ್ಷದಷ್ಟಿದೆ. ಕೊರೋನಾ ಸಾಂಕ್ರಾಮಿಕ ರೋಗಕ್ಕೂ ಮುನ್ನ ಈ ಆದಾಯ ರೂ.1.16 ಕೋಟಿಯಷ್ಟಿತ್ತು ಎಂದು ತಿಳಿಸಿದ್ದಾರೆ.

ಈ ನಡುವೆ ದಿನ ಕಳೆಯುತ್ತಿದ್ದಂತೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕತರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟು ದಿನ 1 ಲಕ್ಷ ಇದ್ದ ದೈನಂದಿನ ಪ್ರಯಾಣಿಕರ ಸಂಖ್ಯೆ ಇದೀಗ 1.1 ಲಕ್ಷಕ್ಕೆ ಏರಿಕೆಯಾಗಿದೆ. ಕೊರೋನಾ ಎರಡನೇ ಅಲೆ ಆರಂಭಕ್ಕೂ ಮುನ್ನ ಈ ಸಂಖ್ಯೆ 1.5 ಲಕ್ಷಕ್ಕಿಂತಲೂ ಹೆಚ್ಚಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com