ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ 5 ದಿನ ಮಳೆ ಸಾಧ್ಯತೆ: ಹಲವೆಡೆ ರೆಡ್​ ಅಲರ್ಟ್​

ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸ್ನಾನದ ಕೊಳದಲ್ಲಿ ನೀರು ತುಂಬಿರುವುದು.
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸ್ನಾನದ ಕೊಳದಲ್ಲಿ ನೀರು ತುಂಬಿರುವುದು.

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್​ ತಿಳಿಸಿದ್ದಾರೆ. 

ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ರೆಡ್, ಯೆಲ್ಲೋ, ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ತುಂತುರು ಮಳೆಯಾಗಲಿದೆ. ಜು.17 ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಹೇಳಲಾಗುತ್ತಿದೆ.

ಉತ್ತರ ಕನ್ನಡ. ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಜು. 16ರಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಜುಲೈ 15 ಮತ್ತು 17ರಂದು ಈ ಪ್ರದೇಶಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಪ್ರದೇಶದ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ನಿನ್ನೆ ಸಂಜೆ 5.30ರವರೆಗೆ ಬೆಂಗಳೂರಿನಲ್ಲಿ ಒಟ್ಟಾರೆ 4.6 ಎಂಎಂ ಮಳೆಯಾಗಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ 13.7 ಎಂಎಂ ಮಳೆಯಾಗಿದೆ ಎಂದು ತಿಳಿಸಿದೆ. 

ಬಿಬಿಎಂಪಿ ಕಂಟ್ರೋಲ್ ರೂಮ್ ಸಿಬ್ಬಂದಿಗಳು ಮಾತನಾಡಿ, ಮರ ಕುಸಿದು ಬಿದ್ದಿರುವ, ನೀರು ತುಂಬಿರುವ ಕುರಿತು ಯಾವುದೇ ದೂರುಗಳೂ ಬಂದಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com