ಜುಲೈ 20 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ!

ಇದೇ ಜುಲೈ 20ರಂದು ದ್ವಿತೀಯ ಪರೀಕ್ಷೆಯ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇಲಾಖೆಯ ವೆಬ್ ಸೈಟ್ ನಲ್ಲಿ ರಿಜಿಸ್ಟರ್ ನಂಬರ್ ದಾಖಲಿಸುವ ಮೂಲಕ ಸಂಪೂರ್ಣ ಫಲಿತಾಂಶವನ್ನು ಪಡೆಯಬಹುದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಇದೇ ಜುಲೈ 20ರಂದು ದ್ವಿತೀಯ ಪರೀಕ್ಷೆಯ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇಲಾಖೆಯ ವೆಬ್ ಸೈಟ್ ನಲ್ಲಿ ರಿಜಿಸ್ಟರ್ ನಂಬರ್ ದಾಖಲಿಸುವ ಮೂಲಕ ಸಂಪೂರ್ಣ ಫಲಿತಾಂಶವನ್ನು ಪಡೆಯಬಹುದಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಪ್ರಥಮ ಪಿಯುಸಿ ಅಂಕ  ಆಧರಿಸಿ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದರು.

ಈ ಕುರಿತು ಹೇಳಿಕೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದೇ ವ್ಯವಸ್ಥಿತವಾಗಿ ಫಲಿತಾಂಶ ನೀಡಲಾಗುವುದು. ಯಾವುದೇ ಶ್ರೇಯಾಂಕ ನೀಡುವುದಿಲ್ಲ. ಅಂಕಗಳ ಆಧಾರದ ಮೇಲೆಯೇ ಸಿಬಿಎಸ್ಇ ಮಾದರಿಯಲ್ಲಿ ಎಸ್ಎಸ್ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕ ಆಧರಿಸಿ  ಫಲಿತಾಂಶ ಪ್ರಕಟಿಸಲಾಗುವುದು. ಎಸ್ಎಸ್ಎಲ್ ಸಿ ಪರೀಕ್ಷೆ ನಡೆದ ಮರು ದಿನವೇ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದೆ.

ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ನೋಂದಣಿ ನಂಬರ್ ಸಿಕ್ಕಿಲ್ಲ. ಹೀಗಾಗಿ ಫಲಿತಾಂಶ ನೋಡುವ ಬಗ್ಗೆ ಗೊಂದಲ ಏರ್ಪಟ್ಟಿದ್ದು, ಇದಕ್ಕೂ ಶಿಕ್ಷಣ ಇಲಾಖೆ ಪರಿಹಾರ ಕಂಡುಕೊಂಡಿದೆ. ಫಲಿತಾಂಶ ನೋಡುವ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸ ರಿಜಿಸ್ಟರ್ ನಂಬರ್ ಜನರೇಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ವೆಬ್  ತಾಣದಲ್ಲಿ know your Number ಅಯ್ಕೆ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. ವಿದ್ಯಾರ್ಥಿಗಳು ತಮ್ಮ ಸಂಖ್ಯೆಯನ್ನು ಮೂರು ದಿನಗಳವರೆಗೆ (ಜುಲೈ 16ರಿಂದ) ಪಡೆಯಬಹುದು. ವಿದ್ಯಾರ್ಥಿಗಳು ಅವರು ಅಧ್ಯಯನ ಮಾಡುವ ಕಾಲೇಜಿನಲ್ಲಿ ವಿದ್ಯಾರ್ಥಿ ಮಟ್ಟದ ವಿವರಗಳನ್ನು ಕೊಂಡೊಯ್ಯುವ  ಲಿಂಕ್‌ ನಲ್ಲಿ ಫಲಿತಾಂಶ ಪರಿಶೀಲಿಸಿಕೊಳ್ಳಬೇಕು. ಅವರ ವಿವರಗಳು ಅವರ ಪೋಷಕರು ಮತ್ತು ವಿದ್ಯಾರ್ಥಿಗಳ ಹೆಸರನ್ನು ಮತ್ತು ಅದರೊಂದಿಗೆ ನೋಂದಣಿ ಸಂಖ್ಯೆಯನ್ನು ಸಹ ಹೊಂದಿರುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎರಡನೇ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ಫ್ರೆಶರ್‌ಗಳು ಮತ್ತು ರಿಪೀಟರ್‌ಗಳು ನೋಂದಣಿ ಸಂಖ್ಯೆಯನ್ನು https://dpue-exam.karnataka.gov.in/iipu2021 ನೋಂದಣಿ ಸಂಖ್ಯೆ / ರಿಜಿಸ್ಟರ್ ನಂಬರ್ ಲಿಂಕ್ ಮೂಲಕ ಪ್ರವೇಶಿಸಬಹುದು ಎಂದು ಇಲಾಖೆ ಶುಕ್ರವಾರ  ಸುತ್ತೋಲೆಯನ್ನು ಹೊರಡಿಸಿದೆ. ಜಿಲ್ಲೆಯನ್ನು ಆಯ್ಕೆ ಮಾಡಲು ವಿದ್ಯಾರ್ಥಿಗಳನ್ನು ಕೇಳಲಾಗುತ್ತದೆ, ಮತ್ತು ನಂತರ ಅವರು ಓದುವ ಕಾಲೇಜು. ಈ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ವಿದ್ಯಾರ್ಥಿಗಳು ಎರಡನೇ ಪಿಯುಸಿ ಫಲಿತಾಂಶಗಳನ್ನು ಪ್ರವೇಶಿಸಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. 

ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಹೋಗಲಿದೆ. ಜತೆಗೆ ಆಯಾ ಕಾಲೇಜುಗಳಿಗೆ ಫಲಿತಾಂಶದ ವಿವರ ನೀಡಲಾಗುವುದು. ಫಲಿತಾಂಶದ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಖಚಿತ ಪಡಿಸಿಕೊಂಡು, ಜನರೇಟ್ ಆದ ರಿಜಿಸ್ಟರ್ ನಂಬರ್ ಪರಿಶೀಲಿಸಿ ಜು. 20  ರ ನಂತರ ಫಲಿತಾಂಶ ನೋಡಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com