ದಕ್ಷಿಣ ಕನ್ನಡ: ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಕೊರೋನಾಗೆ ಒಂದೇ ದಿನ ಇಬ್ಬರು ಬಲಿ!

ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲ್ಲೂಕಿನ ನೆಲ್ಯಾಡಿ ನಿವಾಸಿ ವೃದ್ಧ ದಂಪತಿಗಳು ಕೋವಿಡ್ ನಿಂದ ಖಾಸಗಿ ಆಸ್ಪತ್ರೆಯಲ್ಲಿ ಒಂದೇ ದಿನ ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲ್ಲೂಕಿನ ನೆಲ್ಯಾಡಿ ನಿವಾಸಿ ವೃದ್ಧ ದಂಪತಿಗಳು ಕೋವಿಡ್ ನಿಂದ ಖಾಸಗಿ ಆಸ್ಪತ್ರೆಯಲ್ಲಿ ಒಂದೇ ದಿನ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮುಂಡಜೆಯಲ್ಲಿರುವ ಸೇಂಟ್ ಮೇರಿಸ್ ಚರ್ಚ್‌ನ ಪ್ಯಾರಿಷ್ ಪಾದ್ರಿಯ ಪೋಷಕರು ಕೊರೋನಾಗೆ ಬಲಿಯಾಗಿದ್ದಾರೆ. ಜೂನ್ 25ರಂದು ಅವರಿಗೆ ಜ್ವರ ಕಾಣಿಸಿಕೊಂಡಿದ್ದು ಔಷಧಿ ತೆಗೆದುಕೊಂಡ ನಂತರ ಇಬ್ಬರೂ ಚೇತರಿಸಿಕೊಂಡಿದ್ದರು. 

ಮತ್ತೆ ಜ್ವರ ಕಾಣಿಸಿಕೊಂಡಿದ್ದರಿಂದ ಅವರನ್ನು ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಹೀಗಾಗಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ನಿನ್ನೆ ಮಧ್ಯಾಹ್ನ 3 ಗಂಟೆಗೆ ಮೇರಿ ನಿಧನರಾಗಿದ್ದು ಕೆಲವು ಗಂಟೆಗಳ ನಂತರ, ಅವರ ಪತಿ ವರ್ಗೀಸ್ ಸಂಜೆ 6.30 ರ ಸುಮಾರಿಗೆ ಸಾವನ್ನಪ್ಪಿದರು.

ದಂಪತಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಕೊವಿಡ್ -19 ಮಾರ್ಗಸೂಚಿ ಪ್ರಕಾರ ಶುಕ್ರವಾರ ಬೆಳಿಗ್ಗೆ ನೆಲ್ಯಾಡಿಯ ಸೇಂಟ್ ಅಲ್ಫೋನ್ಸಸ್ ಚರ್ಚ್ ಸ್ಮಶಾನದಲ್ಲಿ ಅಂತಿಮ ವಿಧಿಗಳನ್ನು ನಡೆಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com