ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿ ಅಕ್ರಮ ಕಟ್ಟಡ ನಿರ್ಮಾಣ ನಿಲ್ಲಿಸಿ: ಬಿಡಿಎಗೆ 'ಸುಪ್ರೀಂ' ಸೂಚನೆ

ಬೆಂಗಳೂರಿನ ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಅಕ್ರಮ ಕಟ್ಟಡ ನಿರ್ಮಾಣವನ್ನು ಕೂಡಲೇ ನಿಲ್ಲಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸುಪ್ರೀಂಕೋರ್ಟ್ ಶನಿವಾರ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿನ ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಅಕ್ರಮ ಕಟ್ಟಡ ನಿರ್ಮಾಣವನ್ನು ಕೂಡಲೇ ನಿಲ್ಲಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸುಪ್ರೀಂಕೋರ್ಟ್ ಶನಿವಾರ ಸೂಚನೆ ನೀಡಿದೆ. 

ನ್ಯಾಯಮೂರ್ತಿಗಳಾದ ಎಸ್‌. ಅಬ್ದುಲ್‌ ನಜೀರ್‌ ಮತ್ತು ಸಂಜೀವ್‌ ಖನ್ನಾ ಅವರನ್ನೊಳಗೊಂಡ ಪೀಠವು ಈ ನಿರ್ದೇಶನ ನೀಡಿದ್ದು, ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ತಿಳಿಸಿದೆ.

2018ರ ಆಗಸ್ಟ್‌ 3ರ ನಂತರ ನಿರ್ಮಿಸಿರುವ ಕಟ್ಟಡಗಳನ್ನು ಸಕ್ರಮಗೊಳಿಸಲು ಸಾಧ್ಯವಿಲ್ಲ. ಹೀಗಾಗಿ, ಈ ಕಟ್ಟಡಗಳನ್ನು ಒಡೆದು ಹಾಕಬಹುದಾಗಿದೆ ಎಂದು ತಿಳಿಸಿದೆ.

ಇದೇ ವೇಳೆ, ಡಾ.ಕೆ.ಶಿವರಾಮ ಕಾರಂತ ಬಡಾವಣೆಗಾಗಿ ಗುರುತಿಸಲಾದ ಜಾಗದಲ್ಲಿ ಕಾನೂನುಬದ್ಧವಾಗಿ ನಿರ್ಮಾಣವಾಗಿರುವ ಕಟ್ಟಡಗಳು ಮತ್ತು ವಾಸದ ಮನೆಗಳನ್ನು ಗುರುತಿಸುವ ಸಲುವಾಗಿ ಸುಪ್ರೀಂ ಕೋರ್ಟ್‌ ನೇಮಿಸಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ನೇತೃತ್ವದ ಸಮಿತಿಯ ಅವಧಿಯನ್ನು 2022ರ ಮಾರ್ಚ್‌ 31ರವರೆಗೆ ನ್ಯಾಯಾಲಯವು ವಿಸ್ತರಿಸಿದೆ.

ಬಿಡಿಎಗೆ ಹೆಚ್ಚುವರಿಯಾಗಿ ಒಬ್ಬ ಕಾರ್ಯನಿರ್ವಾಹಕ ಎಂಜಿನಿಯರ್‌ (ಇಇ), ಇಬ್ಬರು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಎಇಇ) ಮತ್ತು ನಾಲ್ವರು ಸಹಾಯಕ ಎಂಜಿನಿಯರ್‌ಗಳನ್ನು (ಎಇ) 15 ದಿನಗಳ ಒಳಗೆ ನಿಯೋಜಿಸಬೇಕು ಎಂದು ಪೀಠವು ರಾಜ್ಯ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದೆ.

ಜೂನ್‌ 2ರಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿದ ಪೀಠವು, ’ಇದೂವರೆಗೆ ಬಿಡಿಎ ಯಾವುದೇ ಭೂ ಸ್ವಾಧೀನ ಕೈಗೊಂಡಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಸ್ವಾಧೀನ ಪ್ರಕ್ರಿಯೆಯನ್ನು ಬಿಡಿಎ ತ್ವರಿತಗೊಳಿಸಿ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com