ಕೊರೋನಾ 3ನೇ ಅಲೆ ತಡೆಯಲು ಅಗತ್ಯ ಮೂಲಸೌಕರ್ಯ ಸಿದ್ಧಪಡಿಸಿಕೊಳ್ಳಿ: ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ರಾಜ್ಯದಲ್ಲಿ ಮುಂದೆ ಎದುರಾಗುವಂತಹ ಕೊರೋನಾ 3ನೇ ಅಲೆ ತಡೆಯಲು ಅಗತ್ಯ ಮೂಲಸೌಕರ್ಯ ಸಿದ್ಧಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ
ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಮುಂದೆ ಎದುರಾಗುವಂತಹ ಕೊರೋನಾ 3ನೇ ಅಲೆ ತಡೆಯಲು ಅಗತ್ಯ ಮೂಲಸೌಕರ್ಯ ಸಿದ್ಧಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಅನ್ ಲಾಕ್ -4 ರ ಮಾರ್ಗಸೂಚಿಗಳ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆಯಷ್ಟೇ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಯಿತು. 

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿನ ಮೂರನೇ ತಲೆ ತಡೆಯಲು ಅಗತ್ಯ ಮೂಲಸೌಕರ್ಯ ಸಿದ್ಧಪಡಿಸಿಕೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಹೇಳಿದ್ದಾರೆ. 

ಆಸ್ಪತ್ರೆಗಳಲ್ಲಿ ಹಾಸಿಗೆ, ವೈದ್ಯಕೀಯ ಸೌಲಭ್ಯ ಸೇರಿದಂತೆ ಇನ್ನಿತರ ಅಗತ್ಯ ಮೂಲಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಕ್ಕಳ ಆಸ್ಪತ್ರೆಯಲ್ಲಿ ಅಗತ್ಯ ಮೂಲ ಸೌಕರ್ಯ ಹೆಚ್ಚಳ ಆಮ್ಲಜನಕ ದಾಸ್ತಾನು ಮಾಡಿಕೊಳ್ಳುವುದು ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಹಂತದ ಕೊರೊನಾ ಸೋಂಕಿನ ಅಲೆ ತಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ತಗ್ಗುಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸ ಬಾರದು ಅವುಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com