ಬೆಂಗಳೂರಿನಲ್ಲಿ 352 ಸೇರಿ ಇಂದು ರಾಜ್ಯದಲ್ಲಿ 1,464 ಪ್ರಕರಣ ಪತ್ತೆ; 29 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,464 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,86,702ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,464 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,86,702ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 29 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,226ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 352 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,22,807ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 2,706 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,24,197ಕ್ಕೆ ಏರಿಕೆಯಾಗಿದೆ. ಇನ್ನು 26,256 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,13,456 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,464 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.29ಕ್ಕೆ ಇಳಿದಿದೆ.

ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 75, ಚಿಕ್ಕಮಗಳೂರು 81, ದಕ್ಷಿಣ ಕನ್ನಡ 200, ಹಾಸನ 108, ಮೈಸೂರು 117, ಶಿವಮೊಗ್ಗ 63, ತುಮಕೂರು 86, ಉಡುಪಿ 68 ಪ್ರಕರಣಗಳು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com