ಜಾರಕಿಹೊಳಿ ಸಿಡಿ ಪ್ರಕರಣ: ಹೈಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಎಸ್ಐಟಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‍ಐಟಿ) ಸೋಮವಾರ ಹೈಕೋರ್ಟ್‍ಗೆ ತನಿಖಾ ವರದಿ ಸಲ್ಲಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‍ಐಟಿ) ಸೋಮವಾರ ಹೈಕೋರ್ಟ್‍ಗೆ ತನಿಖಾ ವರದಿ ಸಲ್ಲಿಸಿದೆ.

ಈ ಹಿಂದೆ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಎಸ್‍ಐಟಿಯ ಹಿರಿಯ ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ರಿಜಿಸ್ಟಾರ್‍ಗೆ ತನಿಖಾ ವರದಿ ಸಲ್ಲಿಸಿದ್ದಾರೆ. 

ಶಾಸಕ ರಮೇಶ್ ಜಾರಕಿಹೊಳಿ ಮೇಲಿನ ಬೇರೆ ಬೇರೆ ಎಫ್‍ಐಆರ್‍ಗಳ ತನಿಖಾ ವರದಿಯನ್ನು ಕೂಡ ಸಲ್ಲಿಕೆ ಮಾಡಿದ್ದು, ಜು.20ರಂದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಈ ತನಿಖಾ ವರದಿ ರವಾನೆಯಾಗಲಿದೆ. 

ಮಂಗಳವಾರ ತನಿಖಾ ವರದಿ ಪರಿಶೀಲಿಸಿ ವಿಚಾರಣೆ ನಡೆಸಲಿರುವ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕಾ? ಎಸ್‍ಐಟಿ ತನಿಖೆಯೇ ಸಾಕಾ? ಎಂಬ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com