ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿ ತರದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ: ಸಚಿವ ಸುರೇಶ್ ಕುಮಾರ್

ಎಸ್ಎಸ್ಎಲ್'ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತರ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಎಸ್ಎಸ್ಎಲ್'ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತರ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್  ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬರಹುದು. ಫಲಿತಾಂಶ ರದ್ದುಪಡಿಸಿಕೊಂಡ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. 

ಸಲ್ಲಿಕೆಯಾದ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಟೆಂಟ್ಸ್ ಅಜಿವ್ಮೆಂಟ್ ಟ್ರ್ಯಾಕಿಂಗ್ ಪೋರ್ಟಲ್ ನಲ್ಲಿ ದಾಖಲಿಸಲು ಜು.30 ಕೊನೆಯ ದಿನವಾಗಿದೆ. ಜು.31ರೊಳಗೆ ಅರ್ಜಿಗಳನ್ನು ಕಡ್ಡಾಯವಾಗಿ ತಮ್ಮ ಜಿಲ್ಲಾ ಉಪನಿರ್ದೇಶಕ ಕಚೇರಿಕೆ ಸಲ್ಲಿಸಬೇಕು. ಉಪ ನಿರ್ದೇಶಕರು ಆಗಸ್ಟ್ 2ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಬೇಕು. 

ಪಿಯು ಪರೀಕ್ಷಾ ಶುಲ್ಕ ಮರುಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂತಿರುಗಿಸುವ ಯಾವುದೇ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಪರೀಕ್ಷೆ ರದ್ದಾದರೂ ಫಲಿತಾಂಶ ನೀಡಲು ಇಲಾಖೆಗೆ ಹಾಲಿ ಸಂಗ್ರಹಿಸಿರುವ ಪರೀಕ್ಷಾ ಶುಲ್ಕದ ಮೊತ್ತಕ್ಕಿಂತ ಹೆಚ್ಚು ವೆಚ್ಚ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಆಗಿದೆ. ಹಾಗಾಗಿ ಪರೀಕ್ಷಾ ಶುಲ್ಕ ವಾಪಸ್ ನೀಡುವುದಿಲ್ಲ ಎಂದು ಹೇಳಿದ್ದಾರೆ. 

ಉತ್ತೀರ್ಣರಾದ ಎಲ್ಲರಿದೂ ಪದವಿಗೆ ಅವಕಾಶ
ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಪದವಿ ವ್ಯಾಸಂಗಕ್ಕೆ ಅವಕಾಶವಾಗುವಂತೆ ಪದವಿ ಕಾಲೇಜುಗಳಲ್ಲಿನ ಸೀಟುಗಳ ಸಂಖ್ಯೆ ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಕ್ರಮವಹಿಸಲಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. 

ಈ ಬಾರಿ ಪರೀಕ್ಷೆ ಬರೆದಿದ್ದ ಎಲ್ಲಾ ವಿದ್ಯಾರ್ಥಿಗಳನ್ನೂ ಪಾಸು ಮಾಡಿರುವುದರಿಂದ ಉನ್ನತ ಶಿಕ್ಷಣ ಪ್ರವೇಶಕ್ಕೆ ಸಹಜವಾಗಿಯೇ ಸಂಖ್ಯೆ ಹೆಚ್ಚಾಗಲಿದೆ. ಈ ಸಂಬಂಧ ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ ನಾರಾಯಣ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಅವರು ಪಿಯು ಪಾಸಾದ ಎಲ್ಲಾ ಮಕ್ಕಳಿಗೂ ಪದವಿ ಪ್ರವೇಶಕ್ಕೆ ಅಗತ್ಯದಷ್ಟು ಸೀಟು ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com