ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಅತಿವೃಷ್ಟಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಂವಾದ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಹೆಚ್ಚಿನ ಮಳೆಯಿಂದ ತಲೆದೋರಿರುವ ಪ್ರವಾಹ ಪರಿಸ್ಥಿತಿ ಹಾಗೂ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮುಖ್ಯಮಂತ್ರಿ ಮಾಹಿತಿ ಪಡೆದರು. 

ಪ್ರವಾಹ ಪೀಡಿತ ಗ್ರಾಮಗಳ ಗ್ರಾಮಸ್ಥರನ್ನು ಶೀಘ್ರವೇ ತೆರುವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಹಾಗೂ ಪ್ರವಾಹ ಉಂಟಾಗುವ ಸಾದ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಲು ಎನ್ ಡಿಅರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನು ಅಗತ್ಯ ಇರುವ ಜಿಲ್ಲೆಗಳಿಗೆ ತುರ್ತು ಕಳುಹಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು. 

ಕಾಳಜಿ ಕೇಂದ್ರಗಳನ್ನು  ಆದಷ್ಟು ಹೆಚ್ಚು ತೆರೆದು ಸರ್ವ ಸನ್ನದ್ಧವಾಗಿಟ್ಟುಕೊಳ್ಳಬೇಕು, ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ರಜೆ ಹಾಕದೆ ಕೆಲಸ ಮಾಡಬೇಕು. ಹಣಕಾಸಿನ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

 ತುರ್ತು ಪರಿಸ್ಥಿತಿಗೆ ಮುನ್ಸೂಚನೆಯಾಗಿ ಸೇನಾ ಹೆಲಿಕಾಪ್ಟರ್ ಗಳನ್ನು ಸನ್ನದ್ದವಾಗಿಟ್ಟುಕೊಳ್ಳಬೇಕು, ಅಧಿಕಾರಿಗಳು 24 ಗಂಟೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com