ಮಂಗಳೂರು: ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

ನಗರದ ಯೇನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಗುರುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಅಹ್ಮದ್ ಆಸ್ಪತ್ರೆಗೆ ಭೇಟಿ ನೀಡಿದರು.
ಆಸ್ಪತ್ರೆಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕರು
ಆಸ್ಪತ್ರೆಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕರು

ಮಂಗಳೂರು: ನಗರದ ಯೇನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಗುರುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಅಹ್ಮದ್ ಆಸ್ಪತ್ರೆಗೆ ಭೇಟಿ ನೀಡಿದರು.

ಆಸ್ಪತ್ರೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು ಆಸ್ಕರ್ ಪತ್ನಿ ಬ್ಲಾಸಂ ಫರ್ನಾಂಡಿಸ್ ಹಾಗೂ ವೈದ್ಯರ ಜೊತೆ ಮಾತುಕತೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಮಾಧ್ಯಮಗಳಲ್ಲಿ ಬರುತ್ತಿರುವಷ್ಟು ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಹದಗೆಟ್ಟಿಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಚೇತರಿಸುವ ವಿಶ್ವಾಸವನ್ನು ಆಸ್ಕರ್ ಕುಟುಂಬಸ್ಥರು, ವೈದ್ಯರು ಹೊಂದಿದ್ದಾರೆಂದು ಹೇಳಿದರು.

ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆದರೂ, ಇನ್ನೂ 2-3 ದಿನಗಳ ಕಾಲ ಐಸಿಯುವಿನಲ್ಲೇ ಚಿಕಿತ್ಸೆ ನೀಡಲಾಗುತ್ತದೆ. ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವೈದ್ಯರು ಚಿಕಿತ್ಸೆ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. 

ಇದೇ ವೇಳೆ ಶುಕ್ರವಾರ ಇದ್ದ ತಮ್ಮ ಸಭೆಗಳನ್ನು ರದ್ದುಪಡಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು, ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಲು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ವ್ಯಾಯಾಮ ಮಾಡುತ್ತಿದ್ದ ಸಂದರ್ಭದಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ಜಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಅವರ ತಲೆ ಗೋಡೆಗೆ ಹೊಡೆದಿದೆ. ಆರಂಭದಲ್ಲಿ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲ ಎಂದು ನಿರ್ಲಕ್ಷಿಸಿ ಸುಮ್ಮನಾಗಿದ್ದಾರೆ. ಆದರೆ, ಮರುದಿನ ಆರೋಗ್ಯ ತಪಾಸಣೆಗೆ ಯೇನೆಪೋಯ ಆಸ್ಪತ್ರೆಗೆತೆರಳಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು, ರಕ್ತ ಹೆಪ್ಪುಗಟ್ಟಿರುವುದು ತಿಳಿದುಬಂದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com