ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ; ಸಚಿವ ಸಂಪುಟ ವಿಸರ್ಜನೆ; ಗುರುವಾರ ಹೊಸ ಸಿಎಂ ಪದಗ್ರಹಣ ಸಾಧ್ಯತೆ

ನಿರೀಕ್ಷೆಯಂತೆಯೇ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. 
ರಾಜ್ಯಪಾಲರಿಗೆ ಬಿಎಸ್ ವೈ ರಾಜಿನಾಮೆ
ರಾಜ್ಯಪಾಲರಿಗೆ ಬಿಎಸ್ ವೈ ರಾಜಿನಾಮೆ

ಬೆಂಗಳೂರು: ನಿರೀಕ್ಷೆಯಂತೆಯೇ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. 

ಇದಕ್ಕೂ ಮೊದಲು ಸಿಎಂ ಬಿಎಸ್ ಯಡಿಯೂರಪ್ಪ ಅವರು, ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಮ್ಮ ರಾಜಿನಾಮೆ ಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ರಾಜ್ಯಪಾಲರು ಮುಂದಿನ ಸಿಎಂ ಪದಗ್ರಹಣ ಮಾಡುವವರೆಗೂ ಹಂಗಾಮಿ ಸಿಎಂ ಆಗಿ ಮುಂದುವರೆಯುವಂತೆ ಸೂಚನೆ ನೀಡಿದರು.  ಅಲ್ಲದೆ ಹಾಲಿ ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದರು. 

ಅಂತೆಯೇ ತಮ್ಮ ರಾಜಿನಾಮೆ ವಿಚಾರವನ್ನು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜಗತ್​ ಪ್ರಕಾಶ್ ನಡ್ಡಾ ಅವರಿಗೆ ಬಿ.ಎಸ್.ಯಡಿಯೂರಪ್ಪ ಅಧಿಕೃತವಾಗಿ ಮಾಹಿತಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಸದೀಯ ಮಂಡಳಿಯಲ್ಲಿ ಮುಂದಿನ ಮುಖ್ಯಮಂತ್ರಿ ಘೋಷಣೆ
ಇನ್ನು ಈ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಅವರು, 'ಮುಂದಿನ ಮುಖ್ಯಮಂತ್ರಿ ಯಾರು ಅಂತ ಬಿ.ಎಸ್.ಯಡಿಯೂರಪ್ಪ ಅವರೇ ಹೇಳುತ್ತಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ  ನೀಡಿದರು. 

ಗುರುವಾರ ಹೊಸ ಸಿಎಂ ಪದಗ್ರಹಣ ಸಾಧ್ಯತೆ
ಇನ್ನು ಇದೇ ಗುರುವಾರ ಮುಂದಿನ ಸಿಎಂ ಪದಗ್ರಹಣ ಮಾಡುವ ಸಾಧ್ಯತೆ ಇದ್ದು, ಈಗಾಗಲೇ ಈ ಸಂಬಂಧ ಸಿದ್ಧತೆಗಳು ಆರಂಭಗೊಂಡಿವೆ. ಹೊಸಮುಖ, ಶುದ್ಧಹಸ್ತ ರಾಜಕಾರಣಿಗೆ ಸಿಎಂ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರ, ಗೋವಾ ಮಾದರಿಯಲ್ಲಿ  ಹೊಸಬರ ಆಯ್ಕೆ ಆಗುವ ಸಾಧ್ಯತೆ ಇದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com