ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಗಂಭೀರ, ಆದರೆ ಸ್ಥಿರ

ಕಳೆದ ಭಾನುವಾರ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪರಿಸ್ಥಿತಿ ಗಂಭೀರವಾಗಿದ್ದು ಸ್ಥಿರವಾಗಿದೆ.
ಆಸ್ಕರ್ ಫೆರ್ನಾಂಡಿಸ್
ಆಸ್ಕರ್ ಫೆರ್ನಾಂಡಿಸ್

ಮಂಗಳೂರು:ಕಳೆದ ಭಾನುವಾರ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪರಿಸ್ಥಿತಿ ಗಂಭೀರವಾಗಿದ್ದು ಸ್ಥಿರವಾಗಿದೆ.

ಎಲ್ಲಾ ಪಕ್ಷಗಳ ನಾಯಕರು ಪಕ್ಷಬೇಧ ಮರೆತು ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಕೇಂದ್ರದ ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ, ಸಮಾಜ ಕಲ್ಯಾಣ ಮತ್ತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು, ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಇಲ್ಲವೇ ಅವರ ಕುಟುಂಬಸ್ಥರಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ಮೊನ್ನೆ ಶನಿವಾರ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯದಲ್ಲಿ ಕೊಂಚ ಮಟ್ಟಿನ ಚೇತರಿಕೆ ಕಂಡುಬಂದು ಕೈಯನ್ನು ಅಲ್ಲಾಡಿಸುತ್ತಿದ್ದರು, ಆದರೂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇಂದು ವೈದ್ಯರು ಡಯಾಲಿಸಿಸ್ ನಡೆಸಲಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ ಅವರ ಮೆದುಳಿನಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆಯಲು ವೈದ್ಯರು ಸರ್ಜರಿ ನಡೆಸಲು ಹಿಂದೇಟು ಹಾಕುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com