ಅಧಿಕಾರದ ಕೊನೆ ದಿನ ಸರ್ಕಾರಿ ನೌಕರರಿಗೆ ಬಿಎಸ್ ವೈ ಬಂಪರ್ ಕೊಡುಗೆ: ಶೇ.21.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ನಿನ್ನೆ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರದ ಕೊನೆಯ ದಿನ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್ ನೀಡಿದ್ದು, ಶೇ.21.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ನಿನ್ನೆ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರದ ಕೊನೆಯ ದಿನ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್ ನೀಡಿದ್ದು, ಶೇ.21.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ.

ರಾಜಿನಾಮೆಗೂ ಮುನ್ನ ತಮ್ಮ ಕೊನೆಯ ಹಂತದ ಕರ್ತವ್ಯಗಳನ್ನು ನಿರ್ವಹಿಸಿದ ಬಿಎಸ್ ಯಡಿಯೂರಪ್ಪ ಅವರು ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ.

ಮೂಲಗಳ ಪ್ರಕಾರ 2020 ರ ಜನವರಿ 1 ರಿಂದ 2021 ರ ಜೂನ್ 30ರ ಅವಧಿಯ ಹೆಚ್ಚುವರಿ ತುಟ್ಟಿಭತ್ಯೆ ಕಂತು ಬಿಡುಗಡೆ ಮಾಡಲು ಸೂಚಿಸಿದ್ದು, 2021 ರ ಜುಲೈ ಒಂದರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿ ಗಳಲ್ಲಿ ನೀಡಲಾಗುವ ತುಟ್ಟಿಭತ್ಯೆ ದರಗಳನ್ನು ಶೇಕಡ 11.25 ರಿಂದ  21.50 ಕ್ಕೆ ಪರಿಷ್ಕರಿಸಲಾಗಿದೆ.

ರಾಜ್ಯ ಸರ್ಕಾರದ ನಿವೃತ್ತ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ತುಟ್ಟಿಭತ್ಯೆ ಷರಿಷ್ಕರಣೆ  ದರಗಳು ಜಾರಿಯಾಗಿವೆ.

ಅವರಿಗೂ ಜುಲೈ 1ರಿಂದ ತುಟ್ಟಿಭತ್ಯೆ ಪರಿಷ್ಕøತ ದರಗಳು ಜಾರಿಗೆ ಬರಲಿದ್ದು, ಶೇ.11.25ರಿಂದ ಶೇ.21.50ಗೆ ಏರಿಕೆ ಮಾಡಲಾಗಿದೆ. ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿದ್ದ ನಿವೃತ್ತ ನೌಕರರಿಗೂ ಈ ಆದೇಶ ಅನ್ವಯಿಸಲಿದೆ. ಜಿಲ್ಲಾ ಪಂಚಾಯ್ತಿಗಳ ಪೂರ್ಣಾವಧಿ  ನೌಕರರಿಗೆ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‍ಚಾರ್ಜ್ ನೌಕರರಿಗೆ ಸರ್ಕಾರದಿಂದ ಸಹಾಯಾನುಧಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ತುಟ್ಟಿಭತ್ಯೆ ಆದೇಶ ಅನ್ವಯವಾಗಲಿದೆ.

ಯುಜಿಸಿ, ಎಐಸಿಟಿಇ, ಐಸಿಎಆರ್, ಎನ್‍ಜೆಪಿಎಸ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‍ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಆರ್ಥಿಕ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com