ಬಿಜೆಪಿ ಸರ್ಕಾರ ತಾನಾಗಿಯೇ ಪತನವಾದರೆ ಚುನಾವಣೆಗೆ ಕಾಂಗ್ರೆಸ್ ರೆಡಿ- ಸಿದ್ದರಾಮಯ್ಯ

ರಾಜ್ಯದಲ್ಲಿ ಮಧ್ಯಂತರ ಚುನಾವಣೆಯನ್ನು ಎಂದಿಗೂ ಇಷ್ಟಪಡುವುದಿಲ್ಲ ಆದರೆ, ಒಂದು ವೇಳೆ ಬಿಜೆಪಿ ಸರ್ಕಾರ ತಾನಾಗಿಯೇ ಪತನವಾದರೆ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧವಾಗಿರುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ಮಧ್ಯಂತರ ಚುನಾವಣೆಯನ್ನು ಎಂದಿಗೂ ಇಷ್ಟಪಡುವುದಿಲ್ಲ ಆದರೆ, ಒಂದು ವೇಳೆ ಬಿಜೆಪಿ ಸರ್ಕಾರ ತಾನಾಗಿಯೇ ಪತನವಾದರೆ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧವಾಗಿರುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಖಾನಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿದ್ದ ಎಲ್ಲಾ ಸಚಿವರು ಭ್ರಷ್ಟರಾಗಿದ್ದರು. ಪಕ್ಷಾಂತರಗೊಂಡ 17 ಶಾಸಕರ ಬೆಂಬಲವನ್ನು ಪಡೆಯುವ ಮೂಲಕ ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದ ಕಾರಣ ರಾಜ್ಯದ ಬಿಜೆಪಿ ಸರ್ಕಾರ ನ್ಯಾಯಸಮ್ಮತವಾಗಿಲ್ಲ. ಮೊಟ್ಟೆ ಖರೀದಿ ಹಗರಣದಲ್ಲಿ ಶಶಿಕಲಾ ಜೊಲ್ಲೆ ಅವರಿಂದ ರಾಜೀನಾಮೆಯನ್ನು ಯಡಿಯೂರಪ್ಪ ಪಡೆಯಲೇ ಇಲ್ಲ ಎಂದರು.

ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಗೆ ರಾಷ್ಟ್ರಮಟ್ಟದಲ್ಲಿ ಹೈಕಮಾಂಡ್ ಇದೆ ಮತ್ತು ರಾಜ್ಯ, ಜಿಲ್ಲೆ ಮತ್ತು ತಾಲೂಕ್ ಮಟ್ಟದಲ್ಲಿ ಇತರ ಪಕ್ಷದ ಕಾರ್ಯಕರ್ತರಿದ್ದಾರೆ. ಆದರೆ, ಬಿಜೆಪಿಗೆ ಇಂತಹ ರೀತಿ ಇಲ್ಲ, ಬಿಜೆಪಿಯಲ್ಲಿ ಪ್ರಜಾಪ್ರಭುತ್ವ ಎಂಬುದಿಲ್ಲ. ಆದರೆ ಜೆಡಿಎಸ್ ನಲ್ಲಿ ಕೇವಲ ಒಂದು ಕಮಾಂಡ್ ಇದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ ಆದರೆ, ಕೇಂದ್ರಿಯ ನಾಯಕತ್ವದಿಂದ ವಜಾ ಮಾಡಲಾಗುತ್ತದೆ. ಬಿಜೆಪಿಯಲ್ಲಿ ಮುಖಂಡರ ಯಾವುದೇ ಪಾತ್ರವಿಲ್ಲ, ಅದನ್ನು ಪ್ರಜಾಪ್ರಭುತ್ವ ಎಂದು ಕರೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ಪೂರ್ಣಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ, 2008,2013 ಮತ್ತು 2018ರಲ್ಲಿ ಬಿಜೆಪಿ ಸರ್ಕಾರವಿತ್ತು ಆದರೆ, ಬಹುಮತ ವಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

2023ರ ವಿಧಾನಸಭಾ ಚುನಾವಣೆ ನಂತರ ರಾಜ್ಯದಲ್ಲಿ ಶೇ.100ರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಯಡಿಯೂರಪ್ಪ ಅಥವಾ ಬಿಜೆಪಿಯ ಯಾವುದೇ ನಾಯಕರಿದ್ದರೂ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ತರಲು ಸಾಧ್ಯವಿಲ್ಲ, ಸಂಪೂರ್ಣ ಭ್ರಷ್ಟವಾಗಿರುವ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ ಎಂದರು.

ಖಾನಾಪುರ ಮತ್ತು ಬೆಳಗಾವಿ ಸುತ್ತಮುತ್ತಲಿನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ ಸಿದ್ದರಾಮಯ್ಯ, ಪ್ರವಾಹದ ಬಿಕ್ಕಟ್ಟಿನಿಂದ ರಾಜ್ಯ ಹೊರಬರಲು ಕೇಂದ್ರ ಸರ್ಕಾರ ನೆರವು ನೀಡುತ್ತಿಲ್ಲ. ಸಂಕಷ್ಟದ ಸಂದರ್ಭದಲ್ಲಿ ಇತರ ಅನೇಕ ರಾಜ್ಯಗಳಿಗೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುವುದಿಲ್ಲ, ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ನೆರವನ್ನು ಸಹ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದ ಸಿದ್ದರಾಮಯ್ಯ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಕಾಂಗ್ರೆಸ್ ಮುಖಂಡರನ್ನೊಳಗೊಂಡ ಅನೇಕ ತಂಡಗಳನ್ನು ರಚಿಸಿರುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com