ಪ್ರಧಾನಿ ಮೋದಿ ಭೇಟಿ ಮಾಡಿದ ನೂತನ ಸಿಎಂ ಬೊಮ್ಮಾಯಿ; ಏಮ್ಸ್ ಮಂಜೂರು ಮಾಡಲು ಮನವಿ

ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರು ಜು.30 ರಂದು ನವದೆಹಲಿಗೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಪ್ರಧಾನಿ ಮೋದಿ ಭೇಟಿ ಮಾಡಿದ ನೂತನ ಸಿಎಂ ಬೊಮ್ಮಾಯಿ
ಪ್ರಧಾನಿ ಮೋದಿ ಭೇಟಿ ಮಾಡಿದ ನೂತನ ಸಿಎಂ ಬೊಮ್ಮಾಯಿ

ನವದೆಹಲಿ: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರು ಜು.30 ರಂದು ನವದೆಹಲಿಗೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಸಿಎಂ ಆದ ಬಳಿಕ ಬೊಮ್ಮಾಯಿ ಅವರದ್ದು ಇದೇ ಮೊದಲ ದೆಹಲಿ ಭೇಟಿಯಾಗಿದೆ. 

ಬಿಜೆಪಿ ವರಿಷ್ಠರ ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನೂ ಭೇಟಿ ಮಾಡಿದ್ದು ರಾಜ್ಯದ ಸಂಸದರಿಗೆ ಔತಣ ಕೂಟ ಆಯೋಜಿಸಿದ್ದರು.

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಪ್ರಧಾನಿಗೆ ಮನವಿ

ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿಯವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com