ಬೆಳಗಾವಿ: ಕಾಲೇಜಿನ ಗೇಟ್ ಬಿದ್ದು 10 ವರ್ಷದ ಬಾಲಕ ಸಾವು
ಕಾಲೇಜು ಕಾಂಪೌಂಡ್ ಗೋಡೆಗೆ ಅಳವಡಿಸಿದ್ದ ಮುಖ್ಯ ಗೇಟ್ ವೊಂದು ಆಕಸ್ಮಿಕವಾಗಿ ಬಿದ್ದ ಪರಿಣಾಮ 10 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಅಹಿತಕರ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್ಡಿ ಕಾಲೇಜಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
Published: 31st July 2021 04:53 PM | Last Updated: 31st July 2021 04:53 PM | A+A A-

ಸಾಂದರ್ಭಿಕ ಚಿತ್ರ
ಬೆಳಗಾವಿ: ಕಾಲೇಜು ಕಾಂಪೌಂಡ್ ಗೋಡೆಗೆ ಅಳವಡಿಸಿದ್ದ ಮುಖ್ಯ ಗೇಟ್ ವೊಂದು ಆಕಸ್ಮಿಕವಾಗಿ ಬಿದ್ದ ಪರಿಣಾಮ 10 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಅಹಿತಕರ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್ಡಿ ಕಾಲೇಜಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಮೃತ ಬಾಲಕನನ್ನು ಪಟ್ಟಣದ ಇಂದ್ರಾನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ(10) ಎಂದು ಗುರುತಿಸಲಾಗಿದೆ.
ಗೇಟ್ ಮುಂದೆ ಸುಫೀಯಾನ ರಾಜು ಮುಲ್ಲಾ ಆಟವಾಡುತ್ತಿರುವಾಗ ರಭಸವಾದ ಗಾಳಿಗೆ ಗೇಟ್ ಆತನ ಮೈಮೇಲೆ ಬಿದ್ದಿದೆ. ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.