ರಾಜ್ಯದಲ್ಲಿ ಇಳಿಮುಖದತ್ತ ಕೊರೋನಾ: ಬೆಂಗಳೂರಿನಲ್ಲಿ 3,418 ಸೇರಿ 14,304 ಮಂದಿಗೆ ಪಾಸಿಟಿವ್, 464 ಸೋಂಕಿತರು ಸಾವು!

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 14,304 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26,18,735ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 14,304 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26,18,735ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 464 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 29,554ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 3,734 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,66,647ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 276 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 29,271 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 22,90,861ಕ್ಕೆ ಏರಿಕೆಯಾಗಿದೆ. ಇನ್ನು 2,98,299 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,16,224 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 14,304 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 12.30ಕ್ಕೆ ಇಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com