ಪರೀಕ್ಷೆಗೆ ಹಾಜರಾಗುವ 2ನೇ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ವರ್ಷ ಪರೀಕ್ಷೆಗೆ ಹಾಜರಾಗುವ ಎರಡನೇ ವರ್ಷದ ಪಿಯುಸಿ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಅವಲೋಕಿಸುತ್ತಿದೆ.
ಎಸ್ ಸುರೇಶ್ ಕುಮಾರ್
ಎಸ್ ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ವರ್ಷ ಪರೀಕ್ಷೆಗೆ ಹಾಜರಾಗುವ ಎರಡನೇ ವರ್ಷದ ಪಿಯುಸಿ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಅವಲೋಕಿಸುತ್ತಿದೆ.

ಈ ವರ್ಷ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಸರ್ಕಾರ ಉದ್ದೇಶಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಆರೋಗ್ಯ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಈ ಕುರಿತು ನಿರ್ಧಾರವನ್ನು ತೆಗದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಕೆಲವು ತಜ್ಞರು ಈ ಬಗ್ಗೆ  ಶಿಫಾರಸು ಮಾಡಿದ್ದಾರೆ ಎಂದು ಹೇಳಿದ ಅವರು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. 

ವಿದ್ಯಾರ್ಥಿಗಳಿಗೆ 17 ವರ್ಷ ವಯಸ್ಸಾಗಿರುವುದರಿಂದ ಇದು ಸವಾಲಿನ ಕೆಲಸವಾಗಿದೆ ಮತ್ತು ಕೋವಿಡ್ ಲಸಿಕೆ ಅಭಿಯಾನ  ಪ್ರಸ್ತುತ 18 ವರ್ಷ ಮೇಲ್ಪಟ್ಟವರಿಗೆ ಮಾತ್ರವೇ ಇರಲಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com