ಬೆಂಗಳೂರು: ಸಾಮಾಜಿಕ ಕಾರ್ಯಕರ್ತನ ವಿರುದ್ಧ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ದೂರು ದಾಖಲು

ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ  ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.

ಆಸ್ಪತ್ರೆ ಮತ್ತು ಶಾಸಕರ ಮಾನಹಾನಿ ಮಾಡಲು ಯತ್ನಿಸುತ್ತಿದ್ದಾರೆ, ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಎವಿ ಆಸ್ಪತ್ರೆ ಅಧ್ಯಕ್ಷ ಡಾ.ರಾಜೇಶ್ ಮೂರ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಆಸ್ಪತ್ರೆ ಹೆಸರು ಹೇಳಿಕೊಂಡು ಸುಖಾಸುಮ್ಮನೇ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಆಸ್ಪತ್ರೆ ಘನತೆಗೆ ಧಕ್ಕೆ ತಂದಿದ್ದಾರೆ’ ಎಂದು ಆರೋಪಿಸಿ ಎ.ವಿ. ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಆಡಳಿತ ಮಂಡಳಿ ಗಿರಿನಗರ ಠಾಣೆಗೆ ದೂರು ನೀಡಿದೆ. ಅದರನ್ವಯ ವೆಂಕಟೇಶ್ ಅವರಿಗೆ ಸೋಮವಾರ ನೋಟಿಸ್ ನೀಡಿರುವ ಪೊಲೀಸರು, ವಿಚಾರಣೆಗಾಗಿ ಠಾಣೆಗೆ
ಹಾಜರಾಗುವಂತೆ ಸೂಚಿಸಿದ್ದಾರೆ.

ಬನಶಂಕರಿ ಮೂರನೇ ಹಂತದಲ್ಲಿ ಆಸ್ಪತ್ರೆಯಿದೆ, ಬಸವನಗುಡಿ ಶಾಸಕ ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಆಡಿಯೊ ಸಮೇತ ನಗರ ಪೊಲೀಸ್ ಕಮಿಷನರ್  ಸಾಮಾಜಿಕ ಕಾರ್ಯಕರ್ತರೊಬ್ಬರು  ದೂರು ನೀಡಿದ್ದರು.

ಆದರೆ ಈ ಸಂಬಂಧ ಸ್ಪಷ್ಟನೆ ನೀಡಿರುವ ರಾಜೇಶ್ ಮೂರ್ತಿ ಲಸಿಕೆ ಮಾರಾಟಕ್ಕೂ ಶಾಸಕರಿಗೂ ಯಾವುದೇ ಸಂಬಂಧವಿಲ್ಲ, ಘಟನೆಯ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಅವರು ಫೋನ್ ಕರೆ ವಿವರಗಳನ್ನು ತನಿಖೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿದರು. ಅವರ ಸಂಭಾಷಣೆಯ ಬಗ್ಗೆ ವಿವರಗಳನ್ನು ಕೋರಿ ಸಾಮಾಜಿಕ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com