ರಾಜ್ಯದಲ್ಲಿ ಇಂದು ಕೊರೋನಾಗೆ 463 ಬಲಿ: ಬೆಂಗಳೂರಿನಲ್ಲಿ 4,095 ಸೇರಿ 16,387 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ಇಂದು 16,387 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,35,122ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕು
ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 16,387 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,35,122ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 463 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 30,017ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 4,095 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,70,742ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 307 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 21,199 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 23,12,060ಕ್ಕೆ ಏರಿಕೆಯಾಗಿದೆ. ಇನ್ನು 2,93,124 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,45,923 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 16,387 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 11.22ಕ್ಕೆ ಇಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com