ಬೆಂಗಳೂರಿಗೆ ಸೇರ್ಪಡೆಗೊಂಡ ನೂತನ ಪ್ರದೇಶಗಳಿಗೆ ಮುಂದಿನ ವರ್ಷದಲ್ಲಿ ಕಾವೇರಿ ನೀರು ಪೂರೈಕೆ

ಬೆಂಗಳೂರಿಗೆ ನೂತನವಾಗಿ ಸೇರ್ಪಡೆಗೊಂಡಿರುವ ಎಲ್ಲಾ ಗ್ರಾಮಗಳಿಗು 2022ರ ಡಿಸೆಂಬರ್ ವೇಳೆಗೆ ಕಾವೇರಿ ನೀರು ಪೂರೈಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 
ಸಂಗ್ರಹ ಚಿತ್ರd
ಸಂಗ್ರಹ ಚಿತ್ರd

ಬೆಂಗಳೂರು: ಬೆಂಗಳೂರಿಗೆ ನೂತನವಾಗಿ ಸೇರ್ಪಡೆಗೊಂಡಿರುವ ಎಲ್ಲಾ ಗ್ರಾಮಗಳಿಗು 2022ರ ಡಿಸೆಂಬರ್ ವೇಳೆಗೆ ಕಾವೇರಿ ನೀರು ಪೂರೈಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ತಮ್ಮ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ಬೆಂಗಳೂರು ಜಲ ಮಂಡಳಿಯ ಕಾರ್ಯ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಬೆ ನಡೆಸಿದರು.

ಈ ವೇಳೆ ಮುಖ್ಯಮಂತ್ರಿಗಳಿಗೆ ಜಲಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಬೆಂಗಳೂರು ನಗರಕ್ಕೆ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ಕುಡಿಯುವ ನೀರಿನ ಕೊಳವೆ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದ್ದು, 51 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. 20212 ಡಿಸೆಂಬರ್ ವೇಳೆಗೆ ಉಳಿದ 59 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುವುದು. ಈ ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ ಎಂದು ವಿವರಿಸಿದರು. 

ನಗರಕ್ಕೆ 775 ಎಂಎಲ್ ಹೆಚ್ಚುವರಿ ನೀರು ಒದಗಿಸುವ ರೂ.5,550 ಕೋಟಿ ವೆಚ್ಚದ ಕಾವೇರಿ 5ನೇ ಹಂತ ಯೋಜನೆಯು 2023ರಲ್ಲಿ ಪೂರ್ಣಗೊಳಿಸುವ ಗುರಿಯಿದೆ. ಈ ವರೆಗೆ ಕಾಮಗಾರಿಗಳು ನಿಗದಿತ ಗುರಿಯಿದೆ. ಈ ವರೆಗೆ ಕಾಮಗಾರಿಗಳು ನಿಗದಿತ ಗುರಿಗಿಂತ ವೇಗವಾಗಿ ಪ್ರಗತಿ ಸಾಧಿಸಿವೆ ಎಂದು ತಿಳಿಸಿದರು. 

ಅಧಿಕಾರಿಗಳಿಂಗ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಎಲ್ಲಾ ಯೋಜನೆಗಳು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಅಲ್ಲದೆ, ಬೆಂಗಳೂರು ಜಲಮಂಡಳಿಯ ವ್ಯಾಪ್ತಿಯಲ್ಲಿ ಶೇ.36ರಷ್ಟಿರುವ ನೀರು ಸೋರಿಕೆಯನ್ನು ಶೇ.20ಕ್ಕೆ ಇಳಿಸುವ ಬಗ್ಗೆ ಕಾರ್ಯತಂತ್ರ ರೂಪಿಸುವಂತೆಯೂ ನಿರ್ದೇಶನ ನೀಡಿದರು. 

ನೀರು ಸೋರಿಕೆಯನ್ನು ತಡೆಗಟ್ಟುವ ಕುರಿತು ಇತರೆ ನಗರಗಳ ಮಾಹಿತಿಯನ್ನು ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ಇದೇ ವೇಳೆ ಸೂಚಿಸಿದರು. ಅಲ್ಲದೆ, ಬೆಂಗಳೂರು ಜಲಮಂಡಳಿಯ ಮಳೆಗಾಲದಲ್ಲಿ ತುರ್ತು ಸಂದರ್ಭ ನಿರ್ವಹಣೆಗಾಗಿ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com