ಬೆಂಗಳೂರಿನ ಪ್ರತಿ ವಿಧಾನಸಭೆ ಕ್ಷೇತ್ರಗಳಿಗೂ ಶೀಘ್ರದಲ್ಲೇ ಒಂದು ಸರ್ಕಾರಿ ಆಸ್ಪತ್ರೆ!

ಕೋವಿಡ್ ಸಮಯದಲ್ಲಿ ಹಾಸಿಗೆ ಮತ್ತು ಐಸಿಯುಗಳ ಅಲಭ್ಯತೆ ಮೂಲಕ ನಗರದಲ್ಲಿನ ಆರೋಗ್ಯ ಮೂಲಸೌಕರ್ಯಗಳ ಕೊರತೆ ಜಗಜ್ಜಾಹೀರಾಗಿದ್ದು ಇದೀಗ ಸಚಿವರು ಸೇರಿದಂತೆ ಬೆಂಗಳೂರಿನ ಶಾಸಕರು ತಮ್ಮ ಕ್ಷೇತ್ರದಲ್ಲಿ ಒಂದು ಅಥವಾ ಎರಡು ಸರ್ಕಾರಿ ಆಸ್ಪತ್ರೆಗಳಿಗಾಗಿ ಪ್ರಸ್ತಾಪಿಸುತ್ತಿದ್ದಾರೆ.
ಆರೋಗ್ಯ ಕಾರ್ಯಕರ್ತರು
ಆರೋಗ್ಯ ಕಾರ್ಯಕರ್ತರು

ಬೆಂಗಳೂರು: ಕೋವಿಡ್ ಸಮಯದಲ್ಲಿ ಹಾಸಿಗೆ ಮತ್ತು ಐಸಿಯುಗಳ ಅಲಭ್ಯತೆ ಮೂಲಕ ನಗರದಲ್ಲಿನ ಆರೋಗ್ಯ ಮೂಲಸೌಕರ್ಯಗಳ ಕೊರತೆ ಜಗಜ್ಜಾಹೀರಾಗಿದ್ದು ಇದೀಗ ಸಚಿವರು ಸೇರಿದಂತೆ ಬೆಂಗಳೂರಿನ ಶಾಸಕರು ತಮ್ಮ ಕ್ಷೇತ್ರದಲ್ಲಿ ಒಂದು ಅಥವಾ ಎರಡು ಸರ್ಕಾರಿ ಆಸ್ಪತ್ರೆಗಳಿಗಾಗಿ ಪ್ರಸ್ತಾಪಿಸುತ್ತಿದ್ದಾರೆ. 

ಮುಂದಿನ ಎರಡು, ಮೂರು ವರ್ಷಗಳಲ್ಲಿ ಬೆಂಗಳೂರಿನಲ್ಲಿ 100 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಕನಿಷ್ಠ 20 ಸರ್ಕಾರಿ ಆಸ್ಪತ್ರೆಗಳು ನಿರ್ಮಾಣವಾಗುವ ಸಾಧ್ಯತೆಯಿದೆ. ಪ್ರತಿ ಕ್ಷೇತ್ರದಲ್ಲೂ ಒಂದು ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಲು ರಾಜ್ಯ ಸರ್ಕಾರ ಉತ್ಸುಕವಾಗಿದೆ.

ಕಾರಣ ನಗರದ ಸಾಕಷ್ಟು ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಜನರು ಶಕ್ತರಾಗಿಲ್ಲ. ಪ್ರಸ್ತುತ, ಬೆಂಗಳೂರಿನ ಕೆಲವು ಸರ್ಕಾರಿ ಆಸ್ಪತ್ರೆಗಳು ಬಿಬಿಎಂಪಿಯ ಅಡಿಯಲ್ಲಿ ಬರುತ್ತವೆ. ಕೆಲವು ವೈದ್ಯಕೀಯ ಶಿಕ್ಷಣದ ಅಡಿಯಲ್ಲಿ ಮತ್ತು ಕೆಲವು ಆರೋಗ್ಯ ಇಲಾಖೆಯ ಅಡಿಯಲ್ಲಿ ಬರುತ್ತವೆ. ಇದಲ್ಲದೆ, 140ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಈಗ 27 ಕ್ಷೇತ್ರಗಳಲ್ಲಿ ತಲಾ ಒಂದು ಸರ್ಕಾರಿ ಆಸ್ಪತ್ರೆ ನಿರ್ಮಿಸಲು ಶಾಸಕರು ಮತ್ತು ಸಚಿವರು ಜಮೀನು ಹುಡುಕುತ್ತಿದ್ದಾರೆ. 

ಇತ್ತೀಚೆಗೆ, ಮಹಾದೇವಪುರ ಕ್ಷೇತ್ರದ ಶಾಸಕರಾಗಿರುವ ಸಚಿವ ಅರವಿಂದ್ ಲಿಂಬಾವಲಿ ಅವರು ತಮ್ಮ ಕ್ಷೇತ್ರದಲ್ಲಿ 250 ಹಾಸಿಗೆಗಳ ಆಸ್ಪತ್ರೆ ಪ್ರಾರಂಭವಾಗುವುದಾಗಿ ಘೋಷಿಸಿದರು. ದಾಸರಹಳ್ಳಿ ಶಾಸಕ ಮಂಜುನಾಥ್ ಅವರು 100 ಹಾಸಿಗೆಗಳ ಆಸ್ಪತ್ರೆಯನ್ನು ಪ್ರಕಟಿಸಿದರು. 

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಗೋವಿಂದರಾಜನಗರದ ಶಾಸಕರಾದ ಸಚಿವ ವಿ. ಸೋಮಣ್ಣ ಅವರು ಸದ್ಯಕ್ಕೆ ಯುನಾನಿ ಆಸ್ಪತ್ರೆ ಮತ್ತು ಡಯಾಲಿಸಿಸ್ ಕೇಂದ್ರವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದಾರೆ. ಆದಾಗ್ಯೂ, ದೀರ್ಘಾವಧಿಯ ಕ್ರಮವಾಗಿ, ಎಂಸಿ ಲೇಔಟ್‌ನಲ್ಲಿ 200 ಹಾಸಿಗೆಗಳ ಆಸ್ಪತ್ರೆ ಮತ್ತು ಪಂಥರಪಾಳ್ಯದಲ್ಲಿ 100 ಹಾಸಿಗೆಗಳ ಆಸ್ಪತ್ರೆ ಸೇರಿದಂತೆ ಇನ್ನೂ ಎರಡು ಆಸ್ಪತ್ರೆಗಳನ್ನು ಪ್ರಾರಂಭಿಸಲು ಯೋಜಿಸಿರುವುದಾಗಿ ಹೇಳಿದ್ದು ಮುಂದಿನ ಕೆಲವು ತಿಂಗಳುಗಳಲ್ಲಿ ಎರಡೂ ಆಸ್ಪತ್ರೆಗಳು ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು.

ಭೂಮಿ ಲಭ್ಯತೆಗೆ ಅನುಗುಣವಾಗಿ, ಸರ್ಕಾರದ ಧನಸಹಾಯದೊಂದಿಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಕರ್ನಾಟಕ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್ ಸೇವೆಗಳ ಆಯುಕ್ತ ಡಾ.ಕೆ.ವಿ ತ್ರಿಲೋಕ್ ಚಂದ್ರ ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com