'ಪರೀಕ್ಷೆ ಸಂಬಂಧ ಯಾವುದೇ ಸಭೆಯಲ್ಲಿ ಪಾಲ್ಗೊಂಡಿಲ್ಲ'; ನಕಲಿ ಸುದ್ದಿ ಕುರಿತು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಸ್ಪಷ್ಟನೆ

ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.
ಡಾ.ಸಿಎನ್ ಅಶ್ವಥ್ ನಾರಾಯಣ
ಡಾ.ಸಿಎನ್ ಅಶ್ವಥ್ ನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರ 12ನೇ ಸಿಬಿಎಸ್‌ಸಿ 12ನೇ ತರಗತಿಯ ಪರೀಕ್ಷೆ ರದ್ದುಗೊಳಿಸಿದ ಬೆನ್ನಲ್ಲೇ, ರಾಜ್ಯ ಸರ್ಕಾರದ ಮುಂದಿನ ನಡೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತ ಯಾವುದೇ ಸಭೆಯಲ್ಲಿ ತಾವು ಪಾಲ್ಗೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟನೆ  ನೀಡಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, 'ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ. ಸಂಬಂಧಪಟ್ಟ ಇಲಾಖೆ ಈ ಕುರಿತು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು  ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡಿ' ಎಂದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com