ರಾಜ್ಯದಲ್ಲಿ ಇಂದು ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ: ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಇಂದು ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಡೋಸ್ ಕೊರೊನಾ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಆರೋಗ್ಯ ಸಚಿವ ಡಾ.ಕೆ. ಸುಧಾಕರ್
ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಡೋಸ್ ಕೊರೊನಾ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, 18-44 ವರ್ಷ ವಯೋಮಾನದ ಸುಮಾರು 1.95 ಲಕ್ಷ ನಾಗರೀಕರು ಇಂದು ತಮ್ಮ ಮೊದಲನೇ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಈವರೆಗೂ ರಾಜ್ಯದಲ್ಲಿ 1.47 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದ್ದು, 1.18 ಕೋಟಿ ಜನ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com