ಎಪಿಡೆಮಿಕ್ ಆಸ್ಪತ್ರೆಯಲ್ಲಿ 24 ಐಸಿಯು ಬೆಡ್ ಸ್ಥಾಪನೆ; ಬ್ಲ್ಯಾಕ್ ಫಂಗಸ್ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ: ಡಾ. ಸುಧಾಕರ್

ಆಯುಶ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಕಪ್ಪು ಶಿಲೀಂದ್ರ ಸೋಂಕು ಚಿಕಿತ್ಸೆಗೆ ಸರ್ಕಾರ ಚಿಂತನೆ; ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ

Published: 05th June 2021 05:21 PM  |   Last Updated: 05th June 2021 06:21 PM   |  A+A-


Health and Medical Education Minister Dr.K.Sudhakar in CV Raman General Hospital

ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು

Posted By : Srinivas Rao BV

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ ಸಿ.ವಿ.ರಾಮನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ಕಪ್ಪು ಶಿಲೀಂಧ್ರದ ಔಷಧಿಯ ಕೊರತೆ ಈಗ ಇಲ್ಲ. 15 ದಿನಗಳ ಹಿಂದೆ ಇದ್ದ ಕೊರತೆ ಈಗ ಇಲ್ಲ. ಕೇಂದ್ರದಿಂದ ದೊಡ್ಡ ಪ್ರಮಾಣದಲ್ಲಿ ಔಷಧಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳನ್ನು ಉಚಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ನಿರ್ದಿಷ್ಟ ದರ ನಿಗದಿಪಡಿಸಬೇಕಿದೆ. ಬೇಕಾದ ಹಾಗೆ ಹೆಚ್ಚು ಹಣ ಪಡೆಯುವಂತಿಲ್ಲ. ಇದಕ್ಕಾಗಿ ದರ ನಿಗದಿಪಡಿಸಲಾಗುವುದು. ಚಿಕಿತ್ಸಾ ವೆಚ್ಚಕ್ಕೆ ಇಷ್ಟೇ ಪಡೆಯಬೇಕು ಎಂದು ನಿಗದಿ ಮಾಡಲಾಗುವುದು ಎಂದರು.

ಸಿಎಸ್ ಆರ್ ಚಟುವಟಿಕೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಅಳವಡಿಸಲಾಗಿದೆ. ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿ 24 ಹಾಸಿಗೆಗಳ ಐಸಿಯು ಘಟಕ ಆರಂಭಿಸಲಾಗಿದೆ. ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ 77 ಹಾಸಿಗೆಗಳ ಐಸಿಯು, ಆಕ್ಸಿಜನ್ ಹಾಸಿಗೆ ಅಳವಡಿಸಲಾಗಿದೆ. ಜೊತೆಗೆ ಡಿಆರ್ ಡಿಒ ಸಂಶೋಧಿಸಿದ 1 ಸಾವಿರ ಲೀಟರ್ ಆಕ್ಸಿಜನ್ ಘಟಕವನ್ನು ಅಳವಡಿಸಲಾಗಿದೆ. ಇದು ವಾತಾವರಣದಿಂದ ಆಕ್ಸಿಜನ್ ಪಡೆದು 100 ಹಾಸಿಗೆಗಳಿಗೆ ಪೂರೈಕೆ ಮಾಡುತ್ತದೆ. ಇದನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಒಂದೇ ಭಾಗದಲ್ಲಿ ಹೆಚ್ಚು ಆಕ್ಸಿಜನ್, ಐಸಿಯು ವ್ಯವಸ್ಥೆ ಲಭ್ಯವಿದೆ. ಕೋವಿಡ್ ಪ್ರಕರಣ ಕಡಿಮೆಯಾದರೂ ಸಿದ್ಧತೆಗಳನ್ನು ಮಾಡಿಕೊಂಡಿರಬೇಕಾಗುತ್ತದೆ. ಸಿದ್ಧತೆಗಳನ್ನು ಮಾಡಿಕೊಳ್ಳುವುದು ರಾಜ್ಯ ಸರ್ಕಾರದ ಗಂಭೀರ ಚಿಂತನೆ. ಆ ನಿಟ್ಟಿನಲ್ಲಿ ಆಸ್ಪತ್ರೆಗಳ ಮೂಲಸೌಕರ್ಯ ಹೆಚ್ಚಿಸಲಾಗಿದೆ ಎಂದರು.


Stay up to date on all the latest ರಾಜ್ಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp