ಮೈಸೂರಿನ ಇಬ್ಬರೂ ಅಧಿಕಾರಿಗಳ ವರ್ಗಾವಣೆ, ಕೊರೋನಾ ನಿರ್ವಹಣೆಗೆ ಹಿನ್ನೆಡೆ- ಕಾಂಗ್ರೆಸ್

ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು  ಸರ್ಕಾರ ವರ್ಗಾವಣೆ ಮಾಡಿರುವುದರಿಂದ ಕೊರೋನಾ ನಿರ್ವಹಣೆಗೆ ಹಿನ್ನೆಡೆಯಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ.
ಶಿಲ್ಪಾನಾಗ್, ರೋಹಿಣಿ ಸಿಂಧೂರಿ
ಶಿಲ್ಪಾನಾಗ್, ರೋಹಿಣಿ ಸಿಂಧೂರಿ

ಬೆಂಗಳೂರು: ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು  ಸರ್ಕಾರ ವರ್ಗಾವಣೆ ಮಾಡಿರುವುದರಿಂದ ಕೊರೋನಾ ನಿರ್ವಹಣೆಗೆ ಹಿನ್ನೆಡೆಯಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಬದಲಾದ ಅಧಿಕಾರಿಗಳಿಗೆ ಜಿಲ್ಲೆಯ ಚಿತ್ರಣ ಅರಿಯಲು ಸಾಕಷ್ಟು ಸಮಯ ಹಿಡಿಯಲಿದೆ. ಕೊರೋನಾ ಸಂದರ್ಭದಲ್ಲಿ ಹೊಸ ಅಧಿಕಾರಿಗಳಿಗೂ ಸವಾಲು, ಜನತೆಗೂ ಸಂಕಷ್ಟವಾಗಲಿದೆ ಎಂದಿದೆ. ಈ ಸರ್ಕಾರಕ್ಕೆ ವರ್ಗಾವಣೆಯೊಂದನ್ನು ಬಿಟ್ಟು ನಿಭಾಯಿಸುವ ಬೇರೆ ಯಾವ ಮಾರ್ಗವೂ ತಿಳಿದಿಲ್ಲ ಅಂತಾ ಕಾಂಗ್ರೆಸ್ ಟೀಕಿಸಿದೆ.

ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಅವರು ಈ ಹಿಂದೆ ಇದ್ದ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಗೌತಮ್ ಬಗಾದಿ ಅವರನ್ನು ನೇಮಕ ಮಾಡಲಾಗಿದೆ.

 ಮೈಸೂರು ಮಹಾನಗರ  ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ರನ್ನು ಆರ್ ಡಿಪಿಆರ್ ಇ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಲಕ್ಷ್ನೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com