ತಿಂಗಳ ನಂತರ ಬೆಂಗಳೂರಿನಲ್ಲಿ ಕೊರೋನಾ ಇಳಿಕೆ: ನಗರದಲ್ಲಿ 1,991 ಸೇರಿ ರಾಜ್ಯದಲ್ಲಿ 11,958 ಪ್ರಕರಣ, 340 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 11,958 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,07,481ಕ್ಕೆ ಏರಿಕೆಯಾಗಿದೆ.
ಕೋವಿಡ್ ಟೆಸ್ಟ್
ಕೋವಿಡ್ ಟೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 11,958 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,07,481ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 340 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 31,920ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,992 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,85,118ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 199 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 27,299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 24,36,716ಕ್ಕೆ ಏರಿಕೆಯಾಗಿದೆ. ಇನ್ನು 2,80,186 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,31,553 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 11,958 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 9.08ಕ್ಕೆ ಇಳಿದಿದೆ.

ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 1,991, ಬೆಳಗಾವಿಯಲ್ಲಿ 355, ಬಳ್ಳಾರಿಯಲ್ಲಿ 267, ಚಿಕ್ಕಬಳ್ಳಾಪುರದಲ್ಲಿ 282, ಚಿತ್ರದುರ್ಗದಲ್ಲಿ 294, ದಕ್ಷಿಣ ಕನ್ನಡದಲ್ಲಿ 408, ದಾವಣಗೆರೆಯಲ್ಲಿ 380, ಹಾಸನದಲ್ಲಿ 1108, ಮೈಸೂರಿನಲ್ಲಿ 1,213, ಶಿವಮೊಗ್ಗದಲ್ಲಿ 1224, ತುಮಕೂರಿನಲ್ಲಿ 420, ಉಡುಪಿಯಲ್ಲಿ 394, ಉತ್ತರ ಕನ್ನಡದಲ್ಲಿ 364 ಪ್ರಕರಣಗಳು ವರದಿಯಾಗಿವೆ.

ಕಳೆದ 24 ತಾಸಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಪೈಕಿ ಬೆಂಗಳೂರು ನಗರದಲ್ಲಿ 199, ಗ್ರಾಮಾಂತರದಲ್ಲಿ 5, ಬಳ್ಳಾರಿಯಲ್ಲಿ 9, ದಕ್ಷಿಣ ಕನ್ನಡದಲ್ಲಿ 3, ದಾವಣಗೆರೆಯಲ್ಲಿ 5, ಹಾಸನದಲ್ಲಿ 10, ಕೋಲಾರದಲ್ಲಿ 6, ಮೈಸೂರಿನಲ್ಲಿ 17 ಪ್ರಕರಣಗಳು ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com